ಭಾನುವಾರ, ಏಪ್ರಿಲ್ 27, 2025
Homebusinessಮಹಿಳೆಯರಿಗೆ ಉಚಿತವಾಗಿ ಸಿಗಲಿದೆ 30,000 ರೂ. : ಗೃಹಲಕ್ಷ್ಮೀ ಬೆನ್ನಲ್ಲೇ ಧನಶ್ರೀ ಯೋಜನೆಗೂ ಅರ್ಜಿ ಸಲ್ಲಿಸಿ

ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ 30,000 ರೂ. : ಗೃಹಲಕ್ಷ್ಮೀ ಬೆನ್ನಲ್ಲೇ ಧನಶ್ರೀ ಯೋಜನೆಗೂ ಅರ್ಜಿ ಸಲ್ಲಿಸಿ

- Advertisement -

ಕರ್ನಾಟಕ ರಾಜ್ಯದ ಮಹಿಳೆಯರಿಗೆ ಸದ್ಯ ಬಂಪರ್‌ ಆಫರ್‌ ಸರಕಾರ ಘೋಷಣೆ ಮಾಡುತ್ತಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ವಾರ್ಷಿಕ  24 ಸಾವಿರ ರೂಪಾಯಿಯನ್ನು ನೀಡುತ್ತಿದೆ. ಇದೀಗ ಧನಶ್ರೀ ಯೋಜನೆ ( Subsidy Loan) ಯಡಿಯಲ್ಲಿ ಮಹಿಳೆಯರಿಗೆ 3000  ರೂಪಾಯಿ ನೀಡುವ ಯೋಜನೆ ಜಾರಿಯಲ್ಲಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ (Karnataka State Women’s Development Corporation) ಮಹಿಳೆಯರಿಗಾಗಿ ವಿಶೇಷ ಯೋಜನೆ ಯನ್ನು ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರಕಾರ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯ ಸಹಾಯಧನವನ್ನು ಪಡೆದು ಮಹಿಳೆಯರು ಸ್ವತಃ ವ್ಯವಹಾರವನ್ನು ಆರಂಭಿಸಬಹುದಾಗಿದೆ.

Karnataka Women will get Rs 30,000 free Apply for dhanashree scheme after Gruha Lakshmi
Image Credit to Original Source

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯ ಮೂಲಕ ಮಹಿಳೆಯರು ಗೃಹಲಕ್ಷ್ಮೀ, ಶಕ್ತಿಯೋಜನೆ, ಅನ್ನಭಾಗ್ಯ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದರ ಜೊತೆಗೆ ಧನಶ್ರೀ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ನೀಡುವ ಧನಶ್ರೀ ಯೋಜನೆಯ ಲಾಭವನ್ನು ಮಹಿಳೆಯರು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ : ಮೂರು ತಿಂಗಳು ಕಳೆದರೂ ಗೃಹಲಕ್ಷ್ಮೀ ಹಣ ಬರುತ್ತಿಲ್ಲವೇ..? ನೀವು ಮಾಡಬೇಕಾಗಿರೋದು ಇಷ್ಟು

ಸ್ವ ಉದ್ಯೋಗವನ್ನು ಆರಂಭಿಸಲು ಯೋಚಿಸುತ್ತಿರುವ ಮಹಿಳೆಯರು ಧನಶ್ರೀ ಯೋಜನೆಯ ಅಡಿಯಲ್ಲಿ ಸಹಾಯ ಧನಕ್ಕೆ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ. 18 ವರ್ಷ ದಾಟಿದ ಹಾಗೂ 60  ವರ್ಷ ಮೀರದ ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಈ ಯೋಜನೆಯ ಅಡಿಯಲ್ಲಿ 30 ಸಾವಿರ ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ.

ಲಿಂಗತ್ವ ಅಲ್ಪ ಸಂಖ್ಯಾತರು, ದೇವದಾಸಿ ಮಹಿಳೆಯರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಧನಶ್ರೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಸರಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಸಾಧ್ಯವಾದವರು ಬಾಪೂಜಿ ಕೇಂದ್ರ, ಗ್ರಾಮ ಒನ್‌ ಕೇಂದ್ರಗಳಲ್ಲಿಯೂ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ ಹಣ ಪಡೆಯುವುದು ಇನ್ನಷ್ಟು ಸುಲಭ : ಗೃಹಿಣಿಯರಿಗೆ ಗುಡ್‌ನ್ಯೂಸ್‌ ಜಾರಿಯಾಯ್ತು ಹೊಸ ರೂಲ್ಸ್‌

ಧನಶ್ರೀ ಯೋಜನೆ ಮಾತ್ರವಲ್ಲದೇ ಮಹಿಳೆಯರು ಉದ್ಯೋಗಿನಿ ಯೋಜನೆಯ ಮೂಲಕವೂ ಸ್ವಯಂ ಉದ್ಯೋಗ ನಡೆಸಲು ಅವಕಾಶವಿದೆ. ಈ ಯೋಜನೆಗೆ 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನ ಯುವತಿಯರು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

Karnataka Women will get Rs 30,000 free Apply for dhanashree scheme after Gruha Lakshmi
Image Credit to Original Source

ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ನಡೆಸಲು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮಹಿಳೆಯರಿಗೆ 3 ಲಕ್ಷ ರೂಪಾಯಿ ವರೆಗೆ ಸಹಾಯಧನ ದೊರೆಯಲಿದೆ. ಅದ್ರಲ್ಲಿ ಶೇ.50ರಷ್ಟು ಅಂದ್ರೆ ಒಂದೂವರೆ ಲಕ್ಷ ರೂಪಾಯಿಯ ವರೆಗೆ ಸರಕಾರವೇ ಸಹಾಯಧನ ಒದಗಿಸಲಿದೆ.

ಉಳಿದ ಶೇ.50  ರಷ್ಟು ಹಣವನ್ನು ಸಾಲದ ರೂಪದಲ್ಲಿ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ. ಒಂದೊಮ್ಮೆ ಈ ಯೋಜನೆಯ ಫಲಾನುಭವಿಗಳು ಆಗಬೇಕಾದ್ರೆ ಮಹಿಳೆಯರ ವಾರ್ಷಿಕ ಆದಾಯ  2 ಲಕ್ಷ ರೂಪಾಯಿಗಿಂತಲೂ ಕಡಿಮೆ ಇರಬೇಕು. ಅಲ್ಲದೇ ಸಾಮಾನ್ಯ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ರೆ ಶೇ. 30ರಷ್ಟು ಸಬ್ಸಿಡಿ ದೊರೆಯಲಿದೆ.

ಇದನ್ನೂ ಓದಿ : ಜನಧನ್‌ ಖಾತೆ ಹೊಂದಿದವರಿಗೆ ಗುಡ್‌ನ್ಯೂಸ್‌ : ನಿಮ್ಮ ಖಾತೆಗೆ ಜಮೆ ಆಗಲಿದೆ 2 ಲಕ್ಷ ರೂಪಾಯಿ

ಸಾಮಾನ್ಯ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಶೇ.70ರಷ್ಟು ಹಣವನ್ನು ಸಾಲದ ರೂಪದಲ್ಲಿ ನಿಗದಿತ ಕಂತುಗಳಲ್ಲಿ ಮರುಪಾವತಿ ಮಾಡಲು ಅವಕಾಶ ಕಲಪಿಸಲಾಗಿದೆ. ಆದರೆ ಸಾಮಾನ್ಯ ಮಹಿಳೆಯರ ವಾರ್ಷಿಕ ಆದಾಯದ ಮಿತಿ 1.50 ಲಕ್ಷವನ್ನು ಮೀರಿರಬಾರದು. ಇಷ್ಟೇ ಅಲ್ಲದೇ ಚೇತನ ಯೋಜನೆಯ ಮೂಲಕವೂ ಮಹಿಳೆಯರಿಗೆ ಸಹಾಯಧನ ದೊರೆಯುತ್ತದೆ.

ಚೇತನ ಯೋಜನೆಯಡಿ ಅರ್ಜಿಯನ್ನು ಸಲ್ಲಿಸುವ ಮಹಿಳೆಯರು ವಿಕಲ ಚೇತನರಾಗಿದ್ದರೆ ಅಂತಹ ಸಂದರ್ಭದಲ್ಲಿ 33000 ರೂಪಾಯಿ ಉಚಿತವಾಗಿ ಪಡೆದುಕೊಳ್ಳಬಹುದು. ಮಹಿಳೆಯರು ಇಂತಹ ಸರಕಾರದ ಯೋಜನೆಯ ಲಾಭವನ್ನು ಪಡೆದುಕೊಂಡು ಸ್ವಯಂ ಉದ್ಯೋಗವನ್ನು ಕೈಗೊಳ್ಳಬಹುದಾಗಿದೆ.

Karnataka Women will get Rs 30,000 free Apply for dhanashree scheme after Gruha Lakshmi

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular