ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ : ದೇಶದಲ್ಲಿ ಸಿಲಿಂಡರ್ಗಳಿಗೆ ಭಾರೀ ಅಭಾವ
ಭಾರತದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ಏಕಾಏಕಿ 50 ಪರ್ಸೆಂಟ್ ಕಡಿತವಾಗಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಭಾರತಕ್ಕೂ ತಟ್ಟಲು ಆರಂಭಿಸಿದೆ. ಸಿಲಿಂಡರ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು ದೇಶಾದ್ಯಂತ ಹೋಟೆಲ್ಗಳು, ದೇಗುಲಗಳು, ಪಿಜಿಗಳು ಮಾತ್ರವಲ್ಲದೇ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ಗಳಿಗೂ ಸಂಕಷ್ಟ ಎದುರಾಗಿದೆ.
ಹೋಟೆಲ್ಗಳ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದ್ದರೆ, ಪಿಜಿಗಳಲ್ಲಿ ವಾಸಿಸುವವರಿಗೆ ಊಟದ ವ್ಯವಸ್ಥೆಯನ್ನೇ ಸ್ಥಗಿತಗೊಳಿಸಲಾಗಿದೆ. ಕೆಲ ಇಂದಿರಾ ಕ್ಯಾಂಟೀನ್ಗಳಲ್ಲಿಯೂ ಮಧ್ಯಾಹ್ನದ ಊಟಕ್ಕೆ ಕೊಕ್ ನೀಡಲಾಗಿದೆ. ಪ್ರಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಇದರ ಎಫೆಕ್ಟ್ ತಟ್ಟಿದ್ದು ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಿಸಲು ಕಟ್ಟಿಗೆಯ ಒಲೆಯ ಮೊರೆ ಹೋಗಲಾಗುತ್ತಿದೆ.
ಇದನ್ನೂ ಓದಿ: ಶಾಲಾ ಬಿಸಿಯೂಟಕ್ಕೆ ಯಾವುದೇ ತಡೆಯಿಲ್ಲದೆ ಎಲ್ಪಿಜಿ ಪೂರೈಕೆ: ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ
ಭಾರತದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ಏಕಾಏಕಿ 50 ಪರ್ಸೆಂಟ್ ಕಡಿತವಾಗಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಎನ್ನಲಾಗಿದೆ. ಇನ್ನು ಶಾಲಾ – ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಹಾಸ್ಟೇಲ್ಗಳನ್ನು ಆದ್ಯತೆಯಾಗಿಸಿ ಸಿಲಿಂಡರ್ ಪೂರೈಸುವಂತೆ ಸರ್ಕಾರ ಸೂಚನೆ ನೀಡಿದೆ. ಇದೇ ವಿಚಾರವಾಗಿ ಸಚಿವ ಕೆ.ಎಚ್ ಮುನಿಯಪ್ಪ ಮಾತನಾಡಿದ್ದು, ಒಂದು ಕುಟುಂಬಕ್ಕೆ ಒಂದು ಸಿಲಿಂಡರ್ ಪೂರೈಸುವ ಪ್ರಯತ್ನ ಮಾಡುತ್ತಿದ್ದೇವೆ. ದೇಶ ಸಂಕಷ್ಟದ ಸಂದರ್ಭದಲ್ಲಿ ಇರುವಾಗ ಜನತೆ ಕೂಡ ಸಹಕರಿಸಬೇಕು ಎಂದಿದ್ದಾರೆ.



