ಯುವತಿಯರ ಮದುವೆಗೆ 10 ಗ್ರಾಂ ಚಿನ್ನ, 1 ಲಕ್ಷ ರೂಪಾಯಿ ಉಚಿತ : ಗೃಹಲಕ್ಷ್ಮೀ ಬೆನ್ನಲ್ಲೇ ಮಹಾಲಕ್ಷ್ಮೀ ಯೋಜನೆ ಘೋಷಣೆ

ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತೀ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು 2000  ರೂಪಾಯಿಯನ್ನು ನೀಡಲಾಗುತ್ತಿದೆ. ಇದೀಗ ಪಂಚರಾಜ್ಯ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‌ ಮಹಾಲಕ್ಷ್ಮೀ ಯೋಜನೆಯನ್ನು (Mahalakshmi Scheme) ಘೋಷಣೆ ಮಾಡಿದೆ.

ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕರ್ನಾಟಕದ ಮಹಿಳೆಯರಿಗೆ ವರದಾನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತೀ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು 2000  ರೂಪಾಯಿಯನ್ನು ನೀಡಲಾಗುತ್ತಿದೆ. ಇದೀಗ ಪಂಚರಾಜ್ಯ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‌ ಮಹಾಲಕ್ಷ್ಮೀ ಯೋಜನೆಯನ್ನು (Mahalakshmi Scheme) ಘೋಷಣೆ ಮಾಡಿದೆ.

ಹಿಂದುಳಿದ ವರ್ಗಗಳ ಯುವತಿರಿಗೆ ನೆರವಾಗುವ ನಿಟ್ಟಿನಲ್ಲಿ ಮಹಾಲಕ್ಷ್ಮೀ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಈ ಯೋಜನೆಯ ಮೂಲಕ ಯುವತಿಯರಿಗೆ ಮದುವೆಯ ಸಂದರ್ಭದಲ್ಲಿ 10 ಗ್ರಾಂ ಚಿನ್ನದ ಜೊತೆಗೆ 1 ಲಕ್ಷ ರೂಪಾಯಿಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆಯನ್ನು ಮಾಡಿದೆ.

Mahalakshmi Scheme announced 10 grams of gold, 1 lakh rupees free for marriage of young women after Gruha Lakshmi Scheme
Image Credit to Original Source

ಒಂದೊಮ್ಮೆ ಈ ಯೋಜನೆಯನ್ನು ಜಾರಿಗೆ ತರಲು ಸದ್ಯ 250 ಕೋಟಿ ರೂಪಾಯಿ ಬಂಡವಾಳದ ಅಗತ್ಯವಿದೆ. ಅಂದಹಾಗೆ ಈ ಯೋಜನೆಯನ್ನು ಜಾರಿಗೆ ತರುತ್ತಿರುವುದು ಕರ್ನಾಟಕದಲ್ಲಿ ಅಲ್ಲ ಬದಲಾಗಿ ತೆಲಂಗಾಣದಲ್ಲಿ. ಜೊತೆಗೆ ತೆಲಂಗಾಣ ಕಾಂಗ್ರೆಸ್‌ ಘೋಷಣೆ ಮಾಡಿರುವ ಯೋಜನೆಯ ಕುರಿತು ಅಪಸ್ವರ ಕೇಳಿಬಂದಿದೆ.

ಇದನ್ನೂ ಓದಿ : ನಿಮ್ಮ ಹೆಣ್ಣು ಮಗಳ ಮದುವೆಗೆ ಸಿಗುತ್ತೆ 25 ಲಕ್ಷ ರೂ. : ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಹೊಸ ಯೋಜನೆ

ಇಷ್ಟೇ ಅಲ್ಲಾ ತೆಲಂಗಾಣ ಕಾಂಗ್ರೆಸ್‌ ಸರಕಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರೆ ಮಹಿಳೆಯರಿಗೆ ಮಹಾಲಕ್ಷ್ಮೀ ಯೋಜನೆ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಣೆಯನ್ನು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಘೋಷಣೆ ಮಾಡಿದಂತೆ ಈಗಾಗಲೇ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗಾಗಿ ಹಲವು ಯೋಜನೆ ಘೋಷಿಸಿದೆ.

Mahalakshmi Scheme announced 10 grams of gold, 1 lakh rupees free for marriage of young women after Gruha Lakshmi Scheme
Image Credit to Original Source

ಮಹಿಳೆಯರಿಗೆ ಪ್ರತೀ ತಿಂಗಳು 25,000  ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದು, ಹಣದ ಜೊತೆಗೆ 500 ರೂಪಾಯಿಗೆ ಗ್ಯಾಸ್‌ ಸಿಲಿಂಡರ್‌ ಹಾಗೂ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳಿಂದಾಗಿಯೇ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಈ ಗೃಹಿಣಿಯರಿಗೆ ಮಾತ್ರವೇ ನಾಳೆ ಜಮೆ ಆಗಲಿದೆ ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ

ಗೃಹಲಕ್ಷ್ಮೀ ಯೋಜನೆಯ ಮೂಲಕ ಕರ್ನಾಟಕದಲ್ಲಿ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು ಹಣವನ್ನು ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.  ಇನ್ನು ಗೃಹಜ್ಯೋತಿ ಯೋಜನೆಯ ಮೂಲಕ ಪ್ರತೀ ತಿಂಗಳು 200 ಯೂನಿಟ್‌ ವರೆಗೆ ವಿದ್ಯುತ್‌ ಅನ್ನು ಉಚಿತವಾಗಿ ನೀಡಲಾಗುತ್ತಿದೆ.  ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡುದಾರಿಗೆ ಈ ಯೋಜನೆಯ ಲಾಭ ದೊರೆಯಲಿದೆ.

ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಮಹಿಳೆಯರಿಗಾಗಿ ಜಾರಿಗೊಳಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಎಲ್ಲಾ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರು ರಾಜ್ಯದಾದ್ಯಂತ ಸಾಮಾನ್ಯ ಸರಕಾರಿ ಬಸ್ಸುಗಳಲ್ಲಿ ಸಂಚಾರ ನಡೆಸುತ್ತಿದ್ದಾರೆ.

Mahalakshmi Scheme announced 10 grams of gold, 1 lakh rupees free for marriage of young women after Gruha Lakshmi Scheme
Image Credit to Original Source

ಇದನ್ನೂ ಓದಿ : ಬ್ಯಾಂಕ್ ನಿಂದ ನೀವೇನಾದ್ರೂ ಸಾಲ ಪಡೆದಿದ್ದೀರಾ ? ರಾತ್ರೋ ರಾತ್ರಿ ಹೊಸ ರೂಲ್ಸ್‌ ಜಾರಿ ಮಾಡಿದೆ ಆರ್‌ಬಿಐ

ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಭರವಸೆಯ ಮೂಲಕವೇ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಿತ್ತು. ಇದೀಗ ಕಾಂಗ್ರೆಸ್‌ ಮಾದರಿಯಲ್ಲೇ ಪಂಚರಾಜ್ಯ ಚುನಾವಣೆಗಳನ್ನು ಗೆಲ್ಲಲು ಯೋಜನೆಯನ್ನು ರೂಪಿಸಿದೆ.  ಪಂಚರಾಜ್ಯ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‌ ಸರಕಾರ ಕರ್ನಾಟಕದಲ್ಲಿ ಯುವನಿಧಿ ಯೋಜನೆ ಜಾರಿಗೆ ಮುಂದಾಗಿದೆ.

ಸದ್ಯ ಕರ್ನಾಟಕ ಕಾಂಗ್ರೆಸ್‌ ಸರಕಾರದ ಯೋಜನೆಯನ್ನು ತೆಲಂಗಾಣದ ಕಾಂಗ್ರೆಸ್‌ ಪಕ್ಷ ಜಾರಿಗೊಳಿಸಿದಂತಿದೆ. ಉಚಿತ ಬಸ್‌, ಮದುವೆಗೆ ಚಿನ್ನ ಹಾಗೂ ನಗದು ಜೊತೆಗೆ ಪ್ರತೀ ತಿಂಗಳು 25000 ರೂಪಾಯಿಯ ನೆರವು ನೀಡುವುದಾಗಿಯೂ ಘೋಷಣೆಯನ್ನು ಮಾಡಿದೆ. ಕರ್ನಾಟಕದಲ್ಲಿ ವರ್ಕೌಟ್‌ ಆದ ಗ್ಯಾರಂಟಿ ಭಾಗ್ಯ ತೆಲಂಗಾಣದಲ್ಲೂ ಆಗುತ್ತಾ ಅನ್ನೋದು ಕುತೂಹಲ ಮೂಡಿಸಿದೆ.

Mahalakshmi Scheme announced 10 grams of gold, 1 lakh rupees free for marriage of young women after Gruha Lakshmi Scheme

Comments are closed.