No LPG subsidy : ಜನಸಾಮಾನ್ಯರಿಗೆ ಮತ್ತೊಂದು ಶಾಕ್​ : ಗೃಹೋಪಯೋಗಿ ಎಲ್​ಪಿಜಿ ಸಿಲಿಂಡರ್​​ಗಿಲ್ಲ ಸಬ್ಸಿಡಿ

No LPG subsidy : ಮೊದಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್​ ನೀಡಿದೆ. ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳಿಗೆ ಯಾವುದೇ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ವಿಚಾರವಾಗಿ ಮಾತನಾಡಿದ ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್​ ಚೌಧರಿ, ಗ್ರಾಹಕರು ಇನ್ಮುಂದೆ ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಮಾರುಕಟ್ಟೆಯ ದರದಲ್ಲಿಯೇ ಖರೀದಿ ಮಾಡಬೇಕು. ಕೋವಿಡ್​ ಶುರುವಾದಾಗಿನಿಂದ ಎಲ್​ಪಿಜಿ ಸಬ್ಸಿಡಿ ನೀಡಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿಯೂ ಸಬ್ಸಿಡಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


ಕೋವಿಡ್​ಗಿಂತಲೂ ಮುಂಚೆ ಗೃಹ ಬಳಕೆಯ ಸಿಲಿಂಡರ್​ಗಳು ಸಬ್ಸಿಡಿ ದರದಲ್ಲಿ ಸಿಗುತ್ತಿದ್ದವು. ಆದರೆ ಸಬ್ಸಿಡಿ ಹಣಕ್ಕೆ ನೀಡಲಾಗುತ್ತಿದ್ದ ಸಿಲಿಂಡರ್​ಗಳು ದುರುಪಯೋಗವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿಯಮಾವಳಿಗಳಲ್ಲಿ ಬದಲಾವಣೆಯನ್ನು ಮಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಬ್ಸಿಡಿ ಹಣವನ್ನು ಗ್ರಾಹಕರ ಬ್ಯಾಂಕ್​ ಖಾತೆಗಳಿಗೆ ಹಾಕುತ್ತಿತ್ತು. ಆದರೆ ಕೋವಿಡ್​ ಸಂಕಷ್ಟ ಎದುರಾದಾಗಿನಿಂದ ಈ ಯೋಜನೆಗೆ ತಾತ್ಕಾಲಿಕ ಬ್ರೇಕ್​ ಹಾಕಲಾಗಿತ್ತು.


ಸಮಾಧಾನಕಾರ ವಿಚಾರ ಏನೆಂದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡವರು ಎಲ್​ಪಿಜಿ ಸಿಲಿಂಡರ್​ಗಳಿಗೆ ಸಬ್ಸಿಡಿಯನ್ನು ಪಡೆಯಲಿದ್ದಾರೆ. ಆದರೆ ಉಳಿದವರಿಗೆ ಸಬ್ಸಿಡಿ ಭಾಗ್ಯ ಇರುವುದಿಲ್ಲ. ಹೀಗಾಗಿ ಸಾಮಾನ್ಯ ಜನತೆಗೆ ಮಾರುಕಟ್ಟೆಯ ದರದಲ್ಲಿ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ 1006 ರೂಪಾಯಿಗಳಿಗೆ ಸಿಕ್ಕರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು 200 ರೂಪಾಯಿ ಸಬ್ಸಿಡಿಯನ್ನು ಪಡೆಯಲಿದ್ದಾರೆ.

ಇದನ್ನು ಓದಿ : Kerala HC Reunites Lesbian : ಪೋಷಕರ ಒತ್ತಡದಿಂದ ದೂರಾದ ಸಲಿಂಗಕಾಮಿಗಳನ್ನು ಒಂದುಗೂಡಿಸಿದ ಕೇರಳ ಹೈಕೋರ್ಟ್​

ಇದನ್ನೂ ಓದಿ : rape hubby’s friend :ಪತಿಯೊಂದಿಗೆ ಸಲುಗೆಯಿಂದಿದ್ದ ಮಹಿಳೆಯ ಮೇಲೆ ಗ್ಯಾಂಗ್​​ರೇಪ್​ಗೆ ಸುಪಾರಿ ಕೊಟ್ಟ ಪತ್ನಿ

No LPG subsidy to households, Rs 200 LPG dole limited to Ujjwala beneficiaries

Comments are closed.