OPS implementation : ಒಪಿಎಸ್ ಜಾರಿ : ಸರಕಾರಿ ನೌಕರರಿಗೆ ಶಾಕಿಂಗ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು : (OPS implementation) ಕರ್ನಾಟಕ ಕಾಂಗ್ರೆಸ್ ಸರಕಾರ ಚುನಾವಣಾ ಪೂರ್ವ ಚುನಾವಣಾ ಪ್ರಣಾಳಿಕೆಯಲ್ಲಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಕರ್ನಾಟಕ ಸರಕಾರಿ ನೌಕರರ ಬಹುಕಾಲದ ಬೇಡಿಕೆಗೆ ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (NPS) ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ ಇದೀಗ ಸರಕಾರಿ ನೌಕರರಿಗೆ ಶಾಕಿಂಗ್‌ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ.

ಈಗ ರಾಜ್ಯ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿಲ್ಲ ಎಂದು ಸರಕಾರ ಹೇಳಿದೆ. ಈ ಮೂಲಕ ಒಪಿಎಸ್ ಜಾರಿಗಾಗಿ ಕಾಯುತ್ತಿದ್ದ ರಾಜ್ಯ ಸರಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು. ರಾಜ್ಯದಲ್ಲಿ ಎನ್‌ಪಿಎಸ್ ಯೋಜನೆಯಡಿ ಸರಕಾರಿ ನೌಕರರ ಸಂಖ್ಯೆಗೆ ಸಂಬಂಧಿಸಿದಂತೆ ಸಿಎಂ ನೀಡಿದ ಉತ್ತರದಂತೆ, ಜುಲೈ24, 2023 ರಂತೆ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ 3,04,511 ಆಗಿರುತ್ತದೆ.

ಇದನ್ನೂ ಓದಿ : Orange Alert : ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಇದನ್ನೂ ಓದಿ : Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

ರಾಜ್ಯ ಸರಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಸರಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಇಲ್ಲ. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

OPS implementation: CM Siddaramaiah gives bad news to government employees

Leave A Reply

Your email address will not be published.