ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ( PM Narendra Modi Birthday) ಅವರ ಹುಟ್ಟುಹಬ್ಬದ ದಿನದಂದೇ ಪ್ರಧಾನಿ ವಿಶ್ವಕರ್ಮ ಯೋಜನೆ (PM Vishwakarma Yojana) ಲೋಕಾಪರ್ಣೆಯಾಗಿದೆ. ಈ ಯೋಜನೆಯಲ್ಲಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು 13,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಯೋಜನೆಯ ಮೂಲಕ ಕುಶಲಕರ್ಮಿಗಳಿಗೆ 2 ಲಕ್ಷರೂ.ವರೆಗೆ ಸಬ್ಸಿಡಿ ಸಾಲ (subsidy loan) ನೀಡಲಾಗುತ್ತದೆ.
ಭಾರತೀಯ ಸಾಂಪ್ರದಾಯಿಕ ಕರಕುಶಲ ಮತ್ತು ಕೌಶಲ್ಯಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಜೊತೆಗೆ ವಿಶ್ವಕರ್ಮ ಜಯಂತಿಯ ದಿನದಂದೇ ಈ ಯೋಜನೆ ಜಾರಿಗೆ ಬಂದಿದೆ.
PM Vishwakarma Yojana : ಕುಶಲಕರ್ಮಿಗಳಿಗೆ ಸಿಗಲಿದೆ ಆರ್ಥಿಕ ನೆರವು :
ವಿಶ್ವಕರ್ಮ ಯೋಜನೆಯ ಅಡಿಯಲ್ಲಿ, ದೇಶಾದ್ಯಂತ ಈ ಯೋಜನೆಯು ಕುಶಲಕರ್ಮಿಗಳಿಗೆ ರೂ 2 ಲಕ್ಷದವರೆಗೆ ಸಬ್ಸಿಡಿ ಸಾಲಗಳನ್ನು ಒದಗಿಸುತ್ತದೆ. ಕುಶಲಕರ್ಮಿಗಳ ಕಲಾತ್ಮಕ ಅನ್ವೇಷಣೆಗಳಿಗೆ ಹಣಕಾಸಿನ ತೊಡಕು ಉಂಟಾಗಬಾರದು ಅನ್ನೋ ಕಾರಣಕ್ಕೆ ಈ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆಗಾಗಿ 13,000 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ 2000 ರೂ. ಸಿಗದವರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
PM Vishwakarma Yojana : ಶೇ.5ರ ಬಡ್ಡಿದರದಲ್ಲಿ 1 ಲಕ್ಷ ರೂಪಾಯಿ ಸಾಲ :
ಸಬ್ಸಿಡಿ ಸಾಲ ಮಾತ್ರವಲ್ಲದೇ ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಕುಲಶಕರ್ಮಿಗಳಿಗೆ ಆರಂಭಿಕ ಹಂತದಲ್ಲಿ ಶೇ. 5ರ ಬಡ್ಡಿದರದಲ್ಲಿ 1 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಈ ಯೋಜನೆಯ ಬಡ್ಡಿದರವು ಮಾರುಕಟ್ಟೆಯಲ್ಲಿ ಸಾಲದ ಮೇಲಿನ ಬಡ್ಡಿದರಕ್ಕಿಂತ ಕಡಿಮೆಯಾಗಿದೆ.
ಯೋಜನೆಯ ಮೂಲಕ ಹಂತ ಹಂತವಾಗಿ ಯೋಜನೆಯ ಸಾಲದ ಮೊತ್ತವನ್ನು ಏರಿಕೆ ಮಾಡಲಾಗುತ್ತದೆ. ಅದ್ರಲ್ಲೂ ಈ ಯೋಜನೆಯ ಮೂಲಕ 2 ಲಕ್ಷ ರೂ.ವರೆಗಿನ ಸಾಲವನ್ನು ಒದಗಿಸಲಾಗುತ್ತಿದ್ದು, ಇದಕ್ಕೂ ಕೂಡ ಶೇ.5ರ ಬಡ್ಡಿದರವನ್ನು ವಿಧಿಸಲಾಗುತ್ತದೆ.

ಕೌಶಲ್ಯವರ್ಧನೆಗೆ ಹಣಕಾಸಿನ ನೆರವು :
ಪ್ರಧಾನಿ ವಿಶ್ವಕರ್ಮ ಯೋಜನೆಯ ಮೂಲಕ ಕುಶಲಕರ್ಮಿಗಳಿಗೆ ಸುಧಾರಿತ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಈ ಯೋಜನೆಯ ಹಣಕಾಸಿನ ನೆರವು ನೀಡುವ ಮೂಲಕ ಸಾಂಪ್ರದಾಯಿಕ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಲಾಗುತ್ತದೆ.
ಇನ್ನು ಯುವಜನರಿಗಾಗಿ ಕೌಶಲ್ಯ ತರಬೇತಿ ಕೈಗೊಳ್ಳಲಾಗುತ್ತಿದ್ದು, ಈ ತರಬೇತಿಯಲ್ಲಿ ಪಾಲ್ಗೊಳ್ಳುವ ಯುವಕರಿಗೆ ಸ್ಟೈಫಂಡ್ ನೀಡಲಾಗುತ್ತದೆ. ಕುಶಲಕರ್ಮಿಗಳು ತರಬೇತಿಗಾಗಿ 500 ರೂ.ಗಳ ಸ್ಟೈಫಂಡ್ ಅನ್ನು ಪಡೆಯಲಿದ್ದಾರೆ. ಅಲ್ಲದೇ ಹೆಚ್ಚುವರಿಯಾಗಿ ಆಧುನಿಕ ಉಪಕರಣಗಳನ್ನ ಖರೀದಿಸಲು ಹೆಚ್ಚಿನ ಆಧ್ಯತೆಯನ್ನು ನೀಡಲಾಗುತ್ತದೆ.
ಇದನ್ನೂ ಓದಿ : ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿಸಬಹುದೇ ? ಆದರೆ ಈ ತಪ್ಪುಗಳನ್ನು ಮಾತ್ರ ಮಾಡಲೇ ಬೇಡಿ
PM Vishwakarma Yojana Benifits : ಪಿಎಂ ವಿಶ್ವಕರ್ಮ ಯೋಜನೆಯ ಅನುಕೂಲ :
- ಕುಶಲಕರ್ಮಿಗಳಿಗೆ ಸುಲಭವಾಗಿ ಸಾಲವನ್ನು ನೀಡಲಾಗುತ್ತದೆ.
- ಸುಧಾರಿತ ತಂತ್ರಗಳು ಮತ್ತು ಜ್ಞಾನದೊಂದಿಗೆ ಕುಶಲಕರ್ಮಿಗಳನ್ನು ಸಜ್ಜುಗೊಳಿಸಲಾಗುತ್ತದೆ.
- ಆಧುನಿಕ ಉಪಕರಣಗಳನ್ನು ಪಡೆಯಲು ಹಣಕಾಸಿನ ನೆರವು ನೀಡುವುದು.
- ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಕುಶಲಕರ್ಮಿಗಳಿಗೆ ಪ್ರೋತ್ಸಾಹವನ್ನು ನೀಡಲಾಗುತ್ತದೆ.
- ಕುರಕುಶಲ ವಸ್ತುಗಳನ್ನು ಪರಿಣಾಮಕಾರಿಯಾಗಿ ಮಾರಾಟ ಮಾಡಲು ಸಹಾಯವನ್ನು ಒದಗಿಸಲಾಗುತ್ತದೆ.
ಇನ್ನು ಪ್ರಧಾನಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಸುಮಾರು 30 ಲಕ್ಷ ಕುಟುಂಬಗಳು ಪ್ರಯೋಜನ ಪಡೆಯಲಿವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅಂದಾಜಿಸಿದ್ದಾರೆ. ಸಾಂಪ್ರದಾಯಿಕ ಕರಕುಶಲತೆಗೆ ಆಧುನಿಕ ಟಚ್ ಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಿಎಂ ವಿಶ್ವಕರ್ಮ ಯೋಜನೆ ನೋಂದಣಿ ಹೇಗೆ ?
ಪಿಎಂ ವಿಶ್ವಕರ್ಮ ಯೋಜನೆಯನ್ನು ಜನರು ಸುಲಭವಾಗಿ ನೋಂದಣಿ ಮಾಡಲು ಅನುಕೂಲ ಕಲ್ಪಿಸಲಾಗಿದೆ. ಪ್ರತೀ ಗ್ರಾಮಗಳಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಯೋಜನೆಯ ನೋಂದಣಿ ಕೇಂದ್ರಗಳಾಗಿ ಗುರುತಿಸಲಾಗಿದೆ. ಈ ಕೇಂದ್ರಗಳ ಮೂಲಕ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ : ಇಲ್ಲಿದೆ ಗುಡ್‌ನ್ಯೂಸ್
ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜಾರಿಗೆ ತರಲಾಗುತ್ತಿದೆ. ಆದರೆ ಯೋಜನೆಗೆ ಸಂಪೂರ್ಣ ಆರ್ಥಿಕ ನೆರವನ್ನು ಕೇಂದ್ರ ಸರಕಾರವೇ ನೀಡಲಿದ್ದು, ಯೋಜನೆಯನ್ನು ರಾಜ್ಯಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ರಾಜ್ಯ ಸರಕಾರಗಳ ಜವಾಬ್ದಾರಿಯಾಗಿದೆ.
PM Vishwakarma Yojana Artisans will get 2 lakhs Subsidized loan how to apply