ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾತನಾಡಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲು ನಮಗೂ ಆಸೆ ಇದೆ. ಆದರೆ ಕೋವಿಡ್ ನಿಂದ ಆರ್ಥಿಕ ಸಮಸ್ಯೆ ಉಂಟಾಗಿದೆ. ಸಿಎಂ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಇನ್ನು ಸೇವಾ ಸಿಂಧೂ ಮೂಲಕ 1 ಲಕ್ಷ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಇಂಟರ್ ನೆಟ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಳೆಯ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
(The state government that gave good news to backward classes students)