ಶಾಪಿಂಗ್‌ ಪ್ರಿಯರಿಗೆ ಬಿಗ್‌ ಶಾಕ್‌ : ಶಾಪಿಂಗ್‌ ಮಾಡಲು ಪಾನ್‌ ಜೊತೆ ಆಧಾರ್‌ ಲಿಂಕ್‌ ಕಡ್ಡಾಯ

ನವದೆಹಲಿ : ಶಾಪಿಂಗ್‌ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದ್ರೆ ಇನ್ಮುಂದೆ ದುಬಾರಿ ಶಾಪಿಂಗ್‌ ಮಾಡುವವರಿಗೆ ಸರಕಾರ ಬಿಗ್‌ ಶಾಕ್‌ ಕೊಟ್ಟಿದೆ. ಇನ್ಮುಂದೆ 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಶಾಪಿಂಗ್ ಮಾಡಬೇಕಾದ್ರೆ ಆಧಾರ್ ಜೊತೆ ಪಾನ್ ಲಿಂಕ್ ಮಾಡುವುದು ಕಡ್ಡಾಯವಾಗಲಿದೆ. ಸೆಪ್ಟೆಂಬರ್ 30ರವರೆಗೆ ಆಧಾರ್ ಗೆ ಪಾನ್ ಲಿಂಕ್ ಮಾಡಲು ಅವಕಾಶವಿದೆ.

ಕೇಂದ್ರೀಯ ನೇರ ತೆರಿಗೆ ಮಂಡಳಿ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಶಾಪಿಂಗ್‌ ವೇಳೆಯಲ್ಲಿ ಆಧಾರ್ ಜೊತೆ ಪಾನ್ ಲಿಂಕ್ ಮಾಡದೇ, ಅಮಾನ್ಯ ಪಾನ್ ಬಳಸಿದ್ರೆ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಪಾನ್ ಜೊತೆ ಆಧಾರ್ ಲಿಂಕ್ ಆಗದೆ ಹೋದಲ್ಲಿ ಶಾಪಿಂಗ್ ಗೆ ಮಾತ್ರವಲ್ಲ ಹಲವು ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: Good News : ಬಿಪಿ, ಶುಗರ್, ಕ್ಯಾನ್ಸರ್ ಸೇರಿ 39 ಔಷಧಿಗಳ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಪಾನ್ – ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಕೆವೈಸಿ ಕೂಡ ಅಮಾನ್ಯವಾಗಿರುತ್ತದೆ. ಅಮಾನ್ಯ ಪಾನ್ ಬಳಕೆ ಅಪರಾಧ. ಇದಕ್ಕಾಗಿ 1 ಸಾವಿರಕ್ಕಿಂತ ಹೆಚ್ಚು ದಂಡ ಕಟ್ಟಬೇಕಾಗುತ್ತದೆ. ಮ್ಯೂಚುವಲ್ ಫಂಡ್‌ನಲ್ಲಿ ಹಣ ಹೂಡಲು ಪಾನ್ ಕಡ್ಡಾಯವಾಗಿರುತ್ತದೆ. ಒಂದು ವೇಳೆ ಪಾನ್ ಅಮಾನ್ಯವಾಗಿದ್ದರೆ, ಎಸ್‌ಐಪಿ ಅಥವಾ ಬೇರೆ ಯಾವುದೇ ರೀತಿಯಲ್ಲಿ ಎಮ್‌ಎಫ್‌ನಲ್ಲಿ ಹಣವನ್ನು ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: DMart:ಡಿ ಮಾರ್ಟ್ ಮಾಲೀಕನ ಸಾಧನೆ: ವಿಶ್ವದ 100 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದ ರಾಧಾಕೃಷ್ಣನ್ ದಮಾನಿ!

ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಮತ್ತು 50,000 ಕ್ಕಿಂತ ಹೆಚ್ಚು ಹಣವನ್ನು ಠೇವಣಿ ಇಡಲು ಮತ್ತು ವಿತ್ ಡ್ರಾ ಮಾಡಲು ಪಾನ್ ಅಗತ್ಯ. 5 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಆಭರಣಗಳನ್ನು ಖರೀದಿಸಿದರೆ, ಪಾನ್ ಕಾರ್ಡ್ ವಿವರಗಳನ್ನು ನೀಡಬೇಕಾಗುತ್ತದೆ. ಆಧಾರ್ ಗೆ ಪಾನ್ ಲಿಂಕ್ ಆಗಿಲ್ಲದ ಪಾನ್ ನೀಡಲು ಸಾಧ್ಯವಿಲ್ಲ. 5 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಾಹನ ಖರೀದಿ ವೇಳೆ ಪಾನ್ ವಿವರ ನೀಡಬೇಕು. ಪಾನ್ – ಆಧಾರ್ ಲಿಂಕ್ ಆಗದೆ ಹೋದಲ್ಲಿ ವಾಹನ ಖರೀದಿ ಸಾಧ್ಯವಿಲ್ಲ.

(Big shock for shopping lovers : Aadhaar link with PAN mandatory for shopping)

Comments are closed.