ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ರಾಜ್ಯ ಸರಕಾರ (State Government Employees) ಶುಭಸುದ್ದಿಯನ್ನು ಕೊಟ್ಟಿದೆ. ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ಗೊಳಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಎನ್‌ಪಿಎಸ್ ರದ್ದತಿ ಕೋರಿ ಹಲವು ವರ್ಷಗಳಿಂದಲೂ ರಾಜ್ಯ ಸರಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರಕಾರ ವಿಧಾನಸಭಾ ಕಲಾಪದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಹೇಳಲಾಗಿತ್ತು. ಆದ್ರೀಗ ಓಪಿಎಸ್ ಜಾರಿ ಕುರಿತ ಕಡತಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್ಥಿಕ ಇಲಾಖೆ ಮಾಹಿತಿ ನೀಡಿದೆ.

ಎನ್‌ಪಿಎಸ್ ರದ್ದತಿ ಕೋರಿ ಹಲವು ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್ಥಿಕ ಇಲಾಖೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ವೆಂಕಟಾಚಲಯ್ಯ ಅವರು ಸಲ್ಲಿಸಿದ್ದ ಅರ್ಜಿಗೆ ಮಾಹಿತಿಯನ್ನು ನೀಡಿದೆ. ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರನಾಳಿಕೆಯಲ್ಲಿ ಎನ್‌ಪಿಎಸ್ ರದ್ದು ಮಾಡುವುದಾಗಿ ಭರವಸೆಯನ್ನ ನೀಡಿತ್ತು. ಇನ್ನು ಬಿಜೆಪಿ ಸರಕಾರ ಎನ್‌ಪಿಎಸ್ ರದ್ದು ಮಾಡುವ ಕುರಿತು ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು.
ಇದನ್ನೂ ಓದಿ : Karnataka Bank Jayaram Bhat : ಕರ್ಣಾಟಕ ಬ್ಯಾಂಕ್ ಮಾಜಿ ಸಿಇಒ ಜಯರಾಮ್ ಭಟ್ ವಿಧಿವಶ
ಇದೀಗ ರಾಜ್ಯ ಸರಕಾರಿ ನೌಕರರು ಎನ್‌ಪಿಎಸ್ ರದ್ದತಿ ಕೋರಿ ರಾಜ್ಯ ಸರಕಾರಕ್ಕೆ ಸಾಕಷ್ಟು ಮನವಿಯನ್ನು ಮಾಡಿದ್ದಾರೆ. ರಾಜ್ಯ ಸರಕಾರ ಕೂಡ ಶೀಘ್ರದಲ್ಲಿಯೇ ಈ ಕುರಿತು ಚಿಂತನೆ ನಡೆಸಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
State Government Employees: Good news for government employees: NPS is canceled in the state, OPS is implemented.