ಭಾನುವಾರ, ಏಪ್ರಿಲ್ 27, 2025
Homebusinessಗೃಹಲಕ್ಷ್ಮೀ ಯೋಜನೆ ಹಣ ಜಮೆ ಆಗದಿರುವುದಕ್ಕೆ ಇದೇ ಕಾರಣ ! ಹಾಗಾಗಿ ಈ ಕೆಲಸವನ್ನು ಇಂದೇ...

ಗೃಹಲಕ್ಷ್ಮೀ ಯೋಜನೆ ಹಣ ಜಮೆ ಆಗದಿರುವುದಕ್ಕೆ ಇದೇ ಕಾರಣ ! ಹಾಗಾಗಿ ಈ ಕೆಲಸವನ್ನು ಇಂದೇ ಮಾಡಿ

- Advertisement -

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯನ್ನು (Gruhalakshmi scheme) ಕರ್ನಾಟಕ ಸರಕಾರ ಜಾರಿಗೆ ತಂದಿದೆ. ಈಗಾಗಲೇ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಆದರೆ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಇನ್ನೂ ಹಲವು ಗೃಹಿಣಿಯರ ಬ್ಯಾಂಕ್‌ ಖಾತೆಗೆ (Bank Account) ಬಂದಿಲ್ಲ. ಇದಕ್ಕೆ ಹಲವು ಕಾರಣಗಳಿದ್ದು, ಅದಕ್ಕೆ ಪ್ರಮುಖ ಕಾರಣ ನಿಮ್ಮ ರೇಷನ್‌ ಕಾರ್ಡ್‌ ಆಗಿರಬಹುದು. ಹೀಗಾಗಿ  ಕೂಡಲೇ ನಿಮ್ಮ ರೇಷನ್‌ ಕಾರ್ಡ್‌ (Ration Card)ತಿದ್ದುಪಡಿ ಮಾಡಿಸಬೇಕು.

ರಾಜ್ಯದಲ್ಲಿನ ಕಾಂಗ್ರೆಸ್‌ ಸರಕಾರ (Karnataka Governament) ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಈಗಾಗಲೇ ಕಾಂಗ್ರೆಸ್‌ ಸರಕಾರ ಐದು ಗ್ಯಾರಂಟಿ (Congress Guarantee) ಯೋಜನೆಗಳನ್ನು ಜಾರಿಗೆ ತಂದಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆಯಲ್ಲಿ ಹಲವು ಗೃಹಿಣಿಯರ ಖಾತೆಗೆ 2000 ಸಾವಿರ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗಿದೆ.

this Reason Gruha Lakshmi Yojana Money Not credited Your Bank Account
Image Credit to Original Source

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಬಹುತೇಕ ಮನೆಯ ಯಜಮಾನಿಯರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಹಣ ಬ್ಯಾಂಕ್‌ ಖಾತೆಗೆ ಜಮೆ ಆಗಿಲ್ಲ. ಇದಕ್ಕೆ ಪ್ರಮುಖ ಕಾರಣವಾಗಿರುವುದು ರೇಷನ್‌ ಕಾರ್ಡ್.‌ ಬಹುತೇಕ ಬಿಪಿಎಲ್‌ ಕಾರ್ಡುಗಳಲ್ಲಿ ಮನೆಯ ಪುರುಷರು ಮನೆಯ ಯಜಮಾನರು ಎಂದು ನಮೂದಿಸಿದ್ದಾರೆ. ಮನೆಯ ಪುರುಷರನ್ನು ರೇಷನ್‌ ಕಾರ್ಡುಗಳಲ್ಲಿ ಮುಖ್ಯಸ್ಥ ಎಂದು ನಮೂದಿಸಿದ್ದರೆ ಅಂತಹವರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ದೊರೆಯುವುದಿಲ್ಲ.

ಇದನ್ನೂ ಓದಿ : ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣ ಬಂತಾ ? ಈ ಮೆಸೇಜ್‌ ಬಂದಿದ್ಯಾ ಒಮ್ಮೆ ಚೆಕ್‌ ಮಾಡಿ

ಅರ್ಹ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು ಅನ್ನೋ ಕಾರಣಕ್ಕೆ ರೇಷನ್‌ ಕಾರ್ಡ್‌ಗಳಲ್ಲಿ ಹೆಸರುಗಳನ್ನು ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಿದೆ. ಸೆಪ್ಟೆಂಬರ್‌ 1 ರಿಂದಲೇ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಮುಂದಿನ ಹತ್ತು ದಿನಗಳ ಒಳಗಾಗಿ ತಮ್ಮ ಪಡಿತರ ಚೀಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ.

this Reason Gruha Lakshmi Yojana Money Not credited Your Bank Account
Image Credit To Original Source

ರೇಷನ್‌ ಕಾರ್ಡ್‌ಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಬೆಂಗಳೂರು ಒನ್‌ (Bangalore One), ಕರ್ನಾಟಕ ಒನ್‌ (karnataka One), ಬಾಪೂಜಿ ಸೇವಾ ಕೇಂದ್ರ (Bapooji Seva Kendra) ಹಾಗೂ ತಾಲೂಕು ಕಚೇರಿಯಲ್ಲಿನ ಆಹಾರ ಮತ್ತು ನಾಗರಿಕ ಸೇವಾ ಇಲಾಖೆಯ ಕಚೇರಿಗಳಲ್ಲಿಯೂ ಮಾಡಿಸಿಕೊಳ್ಳಬಹುದು. ಇನ್ನು ನಿಮ್ಮ ಪಡಿತರ ಕಾರ್ಡ್‌ನಲ್ಲಿ ಆದಾಯ ತೆರಿಗೆ ಪಾವತಿದಾರರು ಇದ್ದರೂ ಕೂಡ ಯೋಜನೆಯ ಲಾಭ ದೊರೆಯುವುದಿಲ್ಲ.

ಪಡಿತರ ಚೀಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಿ, ಮಹಿಳೆಯರನ್ನೇ ಮನೆಯ ಯಜಮಾನಿ ಅಂತಾ ರೇಷನ್‌ ಕಾರ್ಡುಗಳಲ್ಲಿ ನಮೂದಿಸಿದ್ರೆ ಅಂತಹ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತೀ ತಿಂಗಳು 2000 ರೂಪಾಯಿ ಹಣವನ್ನು ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಹಣ ಇನ್ನೂ ಬ್ಯಾಂಕ್‌ ಖಾತೆಗೆ ಜಮೆ ಆಗದವರು ಈ ಕೆಲಸವನ್ನು ಇಂದೇ ಮಾಡಿಬಿಡಿ.

ಇದನ್ನೂ ಓದಿ : ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ವಾ ? ಪಡಿತರ ಕಾರ್ಡ್ ತಿದ್ದುಪಡಿಗೆ ಹೊಸ ರೂಲ್ಸ್

ಗೃಹಲಕ್ಷ್ಮೀ ಯೋಜನೆಗಾಗಿ ಈಗಾಗಲೇ ರಾಜ್ಯದಲ್ಲಿನ 1.10 ಕೋಟಿ ಮಹಿಳೆಯರು ನೋಂದಣಿಯನ್ನು ಮಾಡಿಕೊಂಡಿದ್ದಾರೆ. ಇನ್ನೂ 20 ಲಕ್ಷಕ್ಕೂ ಅಧಿಕ ಮಹಿಳೆಯರು ಇನ್ನಷ್ಟೇ ಅರ್ಜಿ ಸಲ್ಲಿಸಬೇಕಾಗಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕುಟುಂಬದ ಮನೆಯ ಯಜಮಾನಿಯ ಬ್ಯಾಂಕ್‌ ಖಾತೆಗೆ (Bank Account) ಪ್ರತೀ ತಿಂಗಳು ಎರಡು ಸಾವಿರ ರೂಪಾಯಿ ಜಮೆ ಆಗಲಿದೆ.

this Reason Gruha Lakshmi Yojana Money Not credited Your Bank Accountಪ್ರತೀ ತಿಂಗಳು 5 ಅಥವಾ 6 ನೇ ತಾರೀಕಿನಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ ಎಂದು ತಿಳಿದು ಬಂದಿದೆ. ಮಹಿಳೆಯರು ಸ್ವಾಭಿಮಾನಿಗಳಾಗಿ ಬದುಕುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ. ಜೊತೆಗೆ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಇರುವ ಎಲ್ಲಾ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ : ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಸ್ವತಃ ಮನೆ ಹೊಂದಲು ಸರಕಾರದಿಂದ ಹೊಸ ಯೋಜನೆ ಜಾರಿ

ಇನ್ನು ಮನೆಯ ಯಜಮಾನಿ ಆದಾಯ ತೆರಿಗೆ ( Income Tax Payers)ಅಥವಾ ಜಿಎಸ್‌ಟಿ (GST)ಪಾವತಿದಾರರು ಆಗಿದ್ದರೆ, ಮನೆಯ ಯಜಮಾನಿಯ ಪತಿ ಜಿಎಸ್‌ಟಿ ಪಾವತಿ ಮಾಡುತ್ತಿದ್ದರೆ ಅಂತಹ ಕುಟುಂಬಗಳಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ದೊರೆಯುವುದಿಲ್ಲ. ಇದನ್ನು ಹೊರತು ಪಡಿಸಿದ್ರೆ ಬಿಪಿಎಲ್‌ (BPL Card), ಎಪಿಎಲ್‌ (APL Card)  ಹಾಗೂ ಅಂತ್ಯೋದಯ (Anthyodaya Card) ಕಾರ್ಡುದಾರರು ಕೂಡ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಬಹುದಾಗಿದೆ.

this Reason Gruha Lakshmi Yojana Money Not credited Your Bank Account

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular