ಭಾನುವಾರ, ಏಪ್ರಿಲ್ 27, 2025
Homebusinessಮಹಿಳಾ ದಿನದಂದು ಮಹಿಳೆಯರಿಗೆ ಭರ್ಜರಿ ಕೊಡುಗೆ : 2025 ರವರೆಗೆ LPG ಸಬ್ಸಿಡಿ 300ರೂ.ಗೆ ಹೆಚ್ಚಳ

ಮಹಿಳಾ ದಿನದಂದು ಮಹಿಳೆಯರಿಗೆ ಭರ್ಜರಿ ಕೊಡುಗೆ : 2025 ರವರೆಗೆ LPG ಸಬ್ಸಿಡಿ 300ರೂ.ಗೆ ಹೆಚ್ಚಳ

- Advertisement -

Women’s Day Big Gift:  ಮಹಿಳಾ ದಿನಾಚರಣೆಯ ದಿನದಂದೇ ಕೇಂದ್ರ ಸರಕಾರ ಮಹಿಳೆಯರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. 2024 ರ ಲೋಕಸಭೆ ಚುನಾವಣೆಗೆ ಮುನ್ನ ಉಜ್ವಲ ಯೋಜನೆ (Ujwala Yojana) ಯಡಿ  ಬಡ ಮಹಿಳೆಯರಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ 300 ರೂಪಾಯಿಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಏಪ್ರಿಲ್ 1 ರಿಂದ ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಘೋಷಿಸಿದೆ.

Women’s Day Big Gift Govt extends Rs 300 LPG subsidy till 2025
Image Credit to Original Source

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸರ್ಕಾರವು ಪ್ರತಿ ವರ್ಷಕ್ಕೆ 14.2 ಕೆಜಿ ಸಿಲಿಂಡರ್‌ಗೆ 12 ರೀಫಿಲ್‌ಗಳಿಗೆ ಸಿಲಿಂಡರ್‌ಗೆ 200 ರೂ.ಘೋಷಣೆ ಮಾಡಿತ್ತು. ಇದೀಗ ಸಬ್ಸಿಡಿ ಮೊತ್ತವನ್ನು 300 ರೂ.ಕ್ಕೆ ಹೆಚ್ಚಳ ಮಾಡಿ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಆದರೆ ಈ ಯೋಜನೆಯನ್ನು ಇನ್ನೂ ಎರಡು ವರ್ಷಗಳ ಅವಧಿಗೆ ವಿಸ್ತರಣೆ ಮಾಡಿದೆ.5 ರವರೆಗೆ 300 ರೂಪಾಯಿ LPG ಸಬ್ಸಿಡಿಯನ್ನು ವಿಸ್ತರಿಸಿದೆ.

ಕೇಂದ್ರ ಸರಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಈಗ ಈ ಸಬ್ಸಿಡಿಯನ್ನು 2024-25ರವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಯೋಜನೆಯ ವಿಸ್ತರಣೆಯಿಂದಾಗಿ ಸುಮಾರು 10 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ಅಲ್ಲದೇ ಸರಕಾರಕ್ಕೆ ಸುಮಾರು 12,000 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ.

ಇದನ್ನೂ ಓದಿ : ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಈ ಅಂಶಗಳನ್ನು ನೀವು ತಿಳಿದಿರಲೇ ಬೇಕು

ಲೋಕಸಭೆ ಚುನಾವಣೆ 2024 ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ. ಗ್ರಾಮೀಣ ಮತ್ತು ವಂಚಿತ ಬಡ ಕುಟುಂಬಗಳಿಗೆ ಶುದ್ಧವಾದ ಅಡುಗೆ ಇಂಧನವಾದ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಲಭ್ಯವಾಗುವಂತೆ ಮಾಡಲು, ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ-ಮುಕ್ತ LPG ಸಂಪರ್ಕಗಳನ್ನು ಒದಗಿಸಲು ಸರ್ಕಾರವು ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಜಾರಿಗೆ ತಂದಿತ್ತು.

ಇದನ್ನೂ ಓದಿ : Aadhaar Card Free Update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್ಸ್‌ಗೆ ಮಾರ್ಚ್ 14 ಕೊನೆಯ ದಿನ

ಈಗಾಗಲೇ ಮಹಿಳೆಯರಿಗೆ ಉಚಿತವಾಗಿ ಗ್ಯಾಸ್‌ ಸಂಪರ್ಕವನ್ನು ನೀಡಲಾಗಿದ್ದು, ಇದೀಗ ಸಬ್ಸಿಡಿ ಮೊತ್ತವನ್ನು ನೀಡಲಾಗುತ್ತಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ, ಸರ್ಕಾರವು ಆಗಸ್ಟ್ ಅಂತ್ಯದಲ್ಲಿ ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂ. ಇದಾದ ಬಳಿಕ ಎಲ್ ಪಿಜಿ ಸಿಲಿಂಡರ್ ದರ 903 ರೂ.ಗೆ ಇಳಿಯಲಿದೆ.

Women’s Day Big Gift Govt extends Rs 300 LPG subsidy till 2025
Image Credit to Original Source

ಉಜ್ವಲ ಫಲಾನುಭವಿಗಳಿಗೆ ಸಿಲಿಂಡರ್‌ಗೆ 300 ರೂ.ಗಳ ಸಬ್ಸಿಡಿಯನ್ನು ಪರಿಗಣಿಸಿ ಬೆಲೆ 603 ರೂ.ಗಳಾಗಿದ್ದು, ಸಬ್ಸಿಡಿ ಮೊತ್ತ ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆ ಆಗಲಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯಡಿ ಈ ಮಹಿಳೆಯರಿಗೆ ಮಾತ್ರವೇ ಸಿಗಲಿದೆ 6000 ರೂ.

Women’s Day Big Gift: Govt extends Rs 300 LPG subsidy till 2025

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular