ಭಾನುವಾರ, ಏಪ್ರಿಲ್ 27, 2025
Homebusinessಯುವನಿಧಿ ಯೋಜನೆಗೆ ಹೊಸ ರೂಲ್ಸ್‌ : ಈ ದಾಖಲೆ ಸಲ್ಲಿಸದಿದ್ರೆ ಸಿಗಲ್ಲ ಯುವನಿಧಿ ಯೋಜನೆಯ ಹಣ

ಯುವನಿಧಿ ಯೋಜನೆಗೆ ಹೊಸ ರೂಲ್ಸ್‌ : ಈ ದಾಖಲೆ ಸಲ್ಲಿಸದಿದ್ರೆ ಸಿಗಲ್ಲ ಯುವನಿಧಿ ಯೋಜನೆಯ ಹಣ

- Advertisement -

Yuva nidhi scheme Karnataka New Rules : ಕರ್ನಾಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದಿರುವ ಯುವ ಜನತೆಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕದ ಕಾಂಗ್ರೆಸ್‌ ಸರಕಾರ ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಈ ಯೋಜನೆಯ ಹಣ ನೇರವಾಗಿ ವರ್ಗಾವಣೆ ಆಗಲಿದೆ. ಆದರೆ  ಪ್ರತೀ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನ ಸಿಗಬೇಕಾದ್ರೆ ಪ್ರತೀ ತಿಂಗಳು ಕಡ್ಡಾಯವಾಗಿ ದಾಖಲೆಯನ್ನು ಸಲ್ಲಿಸಬೇಕಾಗಿದೆ.

ಕರ್ನಾಟಕದಲ್ಲಿ ಶಿಕ್ಷಣವನ್ನು ಪೂರೈಸಿರುವ 2022-23 ನೇ ಸಾಲಿನಲ್ಲಿ ಉತ್ತೀರ್ಣರಾಗಿರುವ ಪದವಿ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತೀ ತಿಂಗಳು ಭತ್ಯೆಯನ್ನು ನೀಡಲಾಗುತ್ತದೆ. ಪದವಿ ಶಿಕ್ಷಣವನ್ನು ಪೂರೈಸಿದವರಿಗೆ ಪ್ರತೀ ತಿಂಗಳು 3000ಸಾವಿರ ಹಾಗೂ ಡಿಪ್ಲೋಮ ಪದವೀಧರರಿಗೆ 1500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ದೊರೆಯಲಿದೆ.

yuva nidhi scheme Karnataka New Rules If this document is not submitted, you will not get the scheme money
Image Credit to Original Source

ಈ ನಡುವಲ್ಲೇ ರಾಜ್ಯ ಸರಕಾರ ಹೊಸ ರೂಲ್ಸ್‌ ಜಾರಿ ಮಾಡಿದೆ. ಯುವನಿಧಿ ಯೋಜನೆಗೆ ಸುಳ್ಳು ದಾಖಲೆಯನ್ನು ಸಲ್ಲಿಕೆ ಮಾಡಿದ್ರೆ, ಉದ್ಯೋಗ ಸಿಕ್ಕ ನಂತರವೂ ಯುವನಿಧಿ ಹಣವನ್ನು ಪಡೆದ್ರೆ ಅಂತಹವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸರಕಾರ ಈ ಹಿಂದೆಯೇ ಎಚ್ಚರಿಕೆಯನ್ನು ನೀಡಿತ್ತು. ಇದೀಗ ಮತ್ತೊಂದು ಹೊಸ ರೂಲ್ಸ್‌ ಜಾರಿ ಮಾಡಿದೆ.

ಇದನ್ನೂ ಓದಿ : ಸುಕನ್ಯಾ ಸಮೃದ್ದಿ ಹಣ ಅವಧಿಗೂ ಮುನ್ನ ವಾಪಾಸ್‌ ಪಡೆಯುವುದು ಹೇಗೆ ? ಇಲ್ಲಿದೆ ಹೊಸ ರೂಲ್ಸ್‌

ಯುವನಿಧಿ ಯೋಜನೆಯಡಿಯಲ್ಲಿ ಪ್ರತೀ ತಿಂಗಳು ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಇನ್ಮುಂದೆ ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್ಲೋಡ್‌ ಮಾಡಬೇಕಾಗಿದೆ. ತಾನು ಯಾವುದೇ ಉದ್ಯೋಗಕ್ಕೆ ಸೇರ್ಪಡೆಯಾಗಿಲ್ಲ ಎಂಬ ಕುರಿತು ದೃಢೀಕರಣವನ್ನು ನೀಡಿದ್ರೆ ಮಾತ್ರವೇ ಯುವನಿಧಿ ಯೋಜನೆಯ ಹಣ ಕೈ ಸೇರಲಿದೆ.

ಈ ಕುರಿತು ರಾಜ್ಯ ಕೌಶಲ್ಯಾಭಿವೃದ್ದಿ ಸಚಿವ ಶರಣ ಪ್ರಕಾಶ ಪಾಟೀಲ್‌ ಅವರು ಮಾಹಿತಿಯನ್ನು ನೀಡಿದ್ದಾರೆ. ಕಳೆದ ಸಾಲಿನಲ್ಲಿ ಶಿಕ್ಷಣವನ್ನು ಪೂರೈಸಿ, ಫಲಿತಾಂಶ ಬಂದು ಆರು ತಿಂಗಳು ಕಳೆದ ನಂತರವೂ ಉದ್ಯೋಗ ಸಿಗದೇ ಇದ್ರೆ ಅಂತಹ ಯುವಜನರಿಗೆ ಮಾತ್ರವೇ ಯುವನಿಧಿ ಯೋಜನೆಯ ಹಣ ಲಭ್ಯವಾಗಲಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಹಣ ಪಡೆಯಲು NPCI ಕಡ್ಡಾಯ : ಸರಕಾರದಿಂದ ಜಾರಿಯಾಯ್ತು ಹೊಸ ರೂಲ್ಸ್‌

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಿಸಿತ್ತು. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು ಎರಡು ಸಾವಿರ ರೂಪಾಯಿ ಭತ್ಯೆಯನ್ನು ನೀಡಲಾಗುತ್ತಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ.

yuva nidhi scheme Karnataka New Rules If this document is not submitted, you will not get the scheme money
Image Credit to Original Source

ಗೃಹಜ್ಯೋತಿ ಯೋಜನೆಯ ಮೂಲಕ 200 ಯೂನಿಟ್‌ ವರೆಗೆ ವಿದ್ಯುತ್‌ ಉಚಿತವಾಗಿ ದೊರೆಯಲಿದೆ. ಇದೀಗ ಕೊನೆಯದಾಗಿ ಯುವನಿಧಿ ಯೋಜನೆ ಯನ್ನು ಸರಕಾರ ಅನುಷ್ಠಾನಗೊಳಿಸಿದೆ. ಯುವನಿಧಿ ಯೋಜನೆ ಯುವ ಜನತೆಗೆ ಹೆಚ್ಚು ಅನುಕೂಲಕರವಾಗಲಿದೆ. ನಿರುದ್ಯೋಗಿ ಯುವಕ, ಯುವತಿಯರಿಗಾಗಿಯೇ ಈ ಯೋಜನೆಯನ್ನು ರೂಪಿಸಲಾಗಿದ್ದು, ಸರಕಾರ ಫಲಾನುಭವಿಗಳ ಮೇಲೆ ಹದ್ದಿನಕಣ್ಣಿಡಲಿದೆ.

ಇದನ್ನೂ ಓದಿ : ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಇದ್ರೆ ಸಾಕು, ಮಹಿಳೆಯರಿಗೆ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂಪಾಯಿ ಸಾಲ

yuva nidhi scheme Karnataka New Rules If this document is not submitted, you will not get the scheme money

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular