ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಮನೆಯಲ್ಲಿದ್ದ 25 ಲಕ್ಷ ರೂಪಾಯಿ ಕ್ಯಾಶ್ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆಯಲ್ಲಿ ರಶ್ಮಿಕಾ ಮನೆಯಲ್ಲಿ 3.94 ಕೋಟಿ ರೂ. ಮೊತ್ತದ ಅಘೋಷಿತ ಆದಾಯ ಪತ್ತೆಯಾಗಿದ್ದು, 1.5 ಕೋಟಿ ರೂಪಾಯಿಗೆ ತೆರಿಗೆ ಕಟ್ಟಿಲ್ಲ ಅನ್ನೋದು ಬಯಲಾಗಿದೆ.

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು 29 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದು, ದಾಳಿಯ ವೇಳೆಯಲ್ಲಿ ಪತ್ತೆಯಾಗಿರೋ ದಾಖಲೆಗಳನ್ನೆಲ್ಲಾ 1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ ನಲ್ಲಿ ಕೊಂಡೊಯ್ದಿದ್ದಾರೆ. ದಾಳಿಯ ವೇಳೆಯಲ್ಲಿ ರಶ್ಮಿಕಾ ಹೆಸರಿನಲ್ಲಿ ಎರಡೆರಡು ಪ್ಯಾನ್ ಕಾರ್ಡ್ ಹೊಂದಿವುದು ಬಯಲಾಗಿದೆ.

ಒಂದು ಪ್ಯಾನ್ ಕಾರ್ಡ್ ಮೂಲಕ 2016-17ರ ವರೆಗಷ್ಟೇ ಆದಾಯ ತೆರಿಗೆ ಸಲ್ಲಿಕೆ ಮಾಡಲಾಗಿದೆ. ರಶ್ಮಿಕಾ ತಂದೆ ಒಡೆತನದ ಕಲ್ಯಾಣ ಮಂಟಪದ ವ್ಯವಹಾರದ ಬಗ್ಗೆಯೂ ಕೆಲ ಮಾಹಿತಿಗಳನ್ನು ಮಚ್ಚಿಡಲಾಗಿದೆ ಅನ್ನೋ ಮಾಹಿತಿ ಬಯಲಾಗಿದೆ.

ರಶ್ಮಿಕಾ ಮಂದಣ್ಣ ತಂದೆ ಒಡೆತನದ ಬೃಹತ್ ಬಂಗಲೆ, ಸೆರೆನಿಟಿ ಕಲ್ಯಾಣ ಮಂಟಪ, ಕಾಫಿ ತೋಟ, ಹೊಸದಾಗಿ ಖರೀದಿ ಮಾಡಿ ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್, ಪೆಟ್ರೋಲ್ ಬಂಕ್ ಜಾಗದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.