Actor Kishore : “ಕಾಂತಾರ”ದ ದೈವ ಅವಮಾನಿಸಿದ ಯುವಕ ರಕ್ತಕಾರಿ ಸಾವು : ನಟ ಕಿಶೋರ್ ಹೇಳಿದ್ದೇನು ?

ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ ‘ಕಾಂತಾರ’ ಸಿನಿಮಾ ಬಾಕ್ಸಾಫೀಸ್ ಸೂಪರ್‌ ಹಿಟ್‌ ಆಗಿದೆ. ಈ ಸಿನಿಮಾದಲ್ಲಿ ಫಾರೆಸ್ಟ್ ಆಫೀಸರ್ ಮುರಳಿಧರ್ ಪಾತ್ರದಲ್ಲಿ ನಟ ಕಿಶೋರ್ (Actor Kishore) ಅಬ್ಬರಿಸಿದ್ದರು. ಇದೀಗ ಕಾಂತಾರ ಸಿನಿಮಾದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿರುವ ವಿಡಿಯೋ ಸಖತ್‌ ವೈರಲ್‌ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ನಟ ಕಿಶೋರ್‌ ‘ನಂಬಿಕೆ ಇರಲಿ, ಮೂಢ ನಂಬಿಕೆ ಬೇಡ. ಅದರ ಹೆಸರಿನಲ್ಲಿ ದ್ವೇಷವೂ ಬೇಡ’ ಎಂದು ಹೇಳಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಕಾಡುಬೆಟ್ಟು ಶಿವ ಮತ್ತು ಫಾರೆಸ್ಟ್ ಆಫೀಸರ್ ಮುರಳಿ ನಡುವಿನ ಪೈಪೋಟಿ ಸಿನಿಪ್ರೇಕ್ಷಕರ ಗಮನ ಸೆಳೆದಿದೆ. ತಮ್ಮ ಅದ್ಭುತ ಅಭಿನಯದಿಂದ ನಟ ಕಿಶೋರ್ ಮೊದಲಿನಿಂದಲೂ ಮೋಡಿ ಮಾಡುತ್ತಾ ಬಂದಿದ್ದಾರೆ. ಇದೀಗ ಅಕ್ಕ ಪಕ್ಕದ ಇಂಡಸ್ಟ್ರಿ ಫಿಲ್ಮ್ ಮೇಕರ್ಸ್ ಕೂಡ ಕಿಶೋರ್‌ಗಾಗಿ ಪಾತ್ರಗಳನ್ನು ಬರೆಯುತ್ತಾರೆ. ತಮ್ಮ ಸಿನಿಮಾಗಳಿಂದ ಮಾತ್ರವಲ್ಲದೇ, ನಟ ಕಿಶೋರ್ ಮಾದರಿ ರೈತ ಕೂಡ ಆಗಿದ್ದಾರೆ.

ಇನ್ನು ತಮ್ಮ ವಿಭಿನ್ನ ಅಭಿಪ್ರಾಯ, ಸಾಮಾಜಿಕ ಚಿಂತನೆಗಳಿಂದ ಗುರುತಿಸಿಕೊಂಡಿದ್ದಾರೆ. ಸಮಾಜದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆಯೂ ಪ್ರತಿಕ್ರಿಯಿಸುತ್ತಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಒಂದರ ಬಗ್ಗೆ ಕಿಶೋರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಎಲ್ಲರಿಗೂ ಅರ್ಥವಾಗುವಂತೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : KD Movie : ಆ್ಯಕ್ಷನ್ ಪ್ರಿನ್ಸ್ “ಕೆಡಿ” ಸಿನಿಮಾದ ಕ್ರೇಜ್ ಹೆಚ್ಚಿಸಿದ ಪ್ರೇಮ್

ಇದನ್ನೂ ಓದಿ : Kranti Movie Trailer Release : ಬಹುನಿರೀಕ್ಷಿತ “ಕ್ರಾಂತಿ” ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಸಿನಿತಂಡ

ಇದನ್ನೂ ಓದಿ : ಮನೆಯ ಬಾಲ್ಕನಿಯಲ್ಲಿ ಸ್ನೇಹಿತರೊಂದಿಗೆ ಹೊಸ ವರ್ಷ ಆಚರಿಸಿದ ಆಲಿಯಾ ಭಟ್ – ರಣಬೀರ್ ಕಪೂರ್

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತಿವೆ. ಯಾವುದು ನಿಜ? ಯಾವುದು ಸುಳ್ಳು ಎನ್ನುವುದು ಕೂಡ ಕೆಲವೊಮ್ಮೆ ಗೊತ್ತಾಗುವುದಿಲ್ಲ. ಇಂತದ್ದೇ ವಿಡಿಯೋವೊಂದರ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ನಟ ಕಿಶೋರ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.

ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ. ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ.ಅದರ ಹೆಸರಲ್ಲಿ ದ್ವೇಷವೂ.ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

A young man insulted by God of Kantara dies bloody death: What did actor Kishore say?

Comments are closed.