Actor Diganth : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿತಂಡಕ್ಕೆ ಸಾಥ್‌ ನೀಡಿದ ದೂದ್‌ ಪೇಡಾ ನಟ ದಿಗಂತ್

ಬಣ್ಣದಲೋಕದಲ್ಲಿ ಸಿನಿಮಾ ಮಾಡುವುದೇ ಒಂದು ಸಾಹಸವಾದರೆ, ಸಿನಿಮಾ ಮಾಡಿ ಜನರಿಗೆ ತಲುಪಿಸುವುದು ಇನ್ನೂ ದೊಡ್ಡ ಸಾಹಸ ಆಗಿದೆ. ಹಾಗೆಯೇ ಅದಕ್ಕೆ ಸರಿಯಾದ ರೀತಿಯ ಪ್ರಚಾರದ ಅವಶ್ಯಕತೆ ಬಹುಮುಖ್ಯ. ಇನ್ನು ಸಿನಿಮಾ ವಿಶೇಷತೆಯ ಮೇಲೆ ವಿಶಿಷ್ಟ ಪ್ರಕಾರದ ಪ್ರಚಾರ‌ ಅಗತ್ಯವಿರುತ್ತದೆ. ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರಚಾರ ನಡೆಸುತ್ತಿರುವುದು ಬೇರೇ ಯಾವ ಸಿನಿಮಾವು ಅಲ್ಲ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿತಂಡ. ‌ನಾನಾ ಬಗೆಯಲ್ಲಿ ಸಿನಿಪ್ರೇಮಿಗಳನ್ನು ಸೆಳೆಯುತ್ತಿರುವ ಈ ಸಿನಿಮಾಗೆ ಆರಂಭದ ದಿನದಿಂದಲೂ ಸ್ಟಾರ್‌ ನಟ-ನಟಿಯರು ಸಾಥ್‌ ನೀಡುತ್ತಾ ಬಂದಿದ್ದಾರೆ. ಇದೀಗ ಮತ್ತೊಬ್ಬ ಸ್ಟಾರ್ ಸಾಥ್ ಕೊಟ್ಟಿದ್ದಾರೆ. ಹಾಸ್ಟೆಲ್ ಹುಡುಗರಿಗೆ (Actor Diganth) ದೂದ್ ಪೇಡಾ ಸಿಹಿ ಸಿಕ್ಕಿದೆ.

ಅಂದರೆ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪುನೀತ್ ರಾಜಕುಮಾರ್, ರಮ್ಯಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಬೆಂಬಲ ಕೊಟ್ಟಿರುವ ಈ ಸಿನಿಮಾದಲ್ಲಿ ದಿಗ್ಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರ ಪಾತ್ರವೇನೆಂಬುದನ್ನು ಸಿನಿತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಜುಲೈ 7ಕ್ಕೆ ದಿಗಂತ್ ಲುಕ್ ರಿವೀಲ್ ಮಾಡಲು ಸಿನಿತಂಡ ಪ್ಲಾನ್ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ : Nikhil Siddhartha : ‘ಸ್ಪೈ’ ಬೆಂಗಳೂರಲ್ಲಿ ಅದ್ಧೂರಿ ಪ್ರಮೋಷನ್ : ಇದೇ 29ಕ್ಕೆ ನಿಖಿಲ್ ಸಿದ್ಧಾರ್ಥ್ ಸಿನಿಮಾ ರಿಲೀಸ್

ಇದನ್ನೂ ಓದಿ : Puneeth Rajkumar – Dheeren Ramkumar : ನಟ ಪುನೀತ್‌ ರಾಜ್‌ಕುಮಾರ್‌ ಹಾಡಿದ ಹಿಂದಿ ಟ್ರ್ಯಾಕ್‌ನ್ನು ಹಂಚಿಕೊಂಡ ನಟ ಧೀರೇನ್ ರಾಮ್‌ಕುಮಾರ್‌

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ. ಈ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಸಿನಿಮಾವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.

Actor Diganth: Doodpeda actor Diganth supported the team of ‘Hostel Hudugaru Bekagiddare’.

Comments are closed.