ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದ ತನಿಖೆ ಚುರುಕಾಗಿದೆ. ಪ್ರಕರಣಕ್ಕೆ ಸಂಬಂದಿಸಿದಂತೆ ನಟ ದಿಗಂತ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಹಿಂದೆ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆಯಲ್ಲಿ ದಿಗಂತ್ ಅವರ ಮೊಬೈಲ್ ಪೋನ್ ವಶ ಪಡಿಸಿಕೊಂಡಿಂದ ಸಿಸಿಬಿ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಇದೀಗ ಮೊಬೈಲ್ ರಿಟ್ರೀವ್ ಮಾಡಿದ ಹಿನ್ನೆಲೆಯಲ್ಲಿಂದು ಸಿಸಿಬಿ ಅಧಿಕಾರಿಗಳು ಮತ್ತೆ ದಿಗಂತ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದಿಗಂತ್ ಇಂದು ಮತ್ತೆ ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪೆಡ್ಲರ್ ಗಳು ಕೂಡ ದಿಗಂತ್ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಜೊತೆಗೆ ಮೊಬೈಲ್ ರಿಟ್ರೀವ್ ಮಾಡಿರುವ ವೇಳೆಯಲ್ಲಿ ಮಹತ್ವದ ಮಾಹಿತಿಗಳು ಲಭ್ಯವಾಗಿದೆಯಾ ? ಅದೇ ಕಾರಣಕ್ಕೆ ದಿಗಂತ್ ಅವರನ್ನು ವಿಚಾರಣೆಗೆ ಕರೆದಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗು ತ್ತಿದೆ.

ಒಂದೊಮ್ಮೆ ಮೊಬೈಲ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯ ಲಭ್ಯವಾದ್ರೂ ಕೂಡ ದಿಗಂತ್ ಅವರಿಗೆ ಮುಳುವಾಗೋದು ಗ್ಯಾರಂಟಿ.