ಹೈದರಾಬಾದ್ : ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅಕ್ಟೋಬರ್ 30 ರಂದು ಸಾಂಸಾರಿಕ ಜೀವನಕ್ಕೆ ಕಾಲಿಡುತ್ತಿದ್ದೇನೆ ಅಂತಾ ಇನ್‍ಸ್ಟಾಗ್ರಾಂನಲ್ಲಿ ಖುದ್ದು ಕಾಜಲ್ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.


ಕಾಜಲ್ ಅಗರ್ ವಾಲ್ ಅವರು ಇಂಟಿರಿಯರ್ ಡಿಸೈನರ್ ಆಗಿರುವ ಗೌತಮ್ ಕಿಟ್ಟು ಎಂಬವರನ್ನು ವಿವಾಹವಾಗಲಿದ್ದಾರೆ. ಗೌತಮ್ ಕಿಟ್ಟು ಡಿಸರ್ನ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕರೂ ಹೌದು. ಕಾಜಲ್ ಅಗರ್ ವಾಲ್ ಹಾಗೂ ಗೌತಮ್ ಕಿಟ್ಟು ಅವರ ವಿವಾಹ ಮುಂಬೈನಲ್ಲಿ ನಡೆಯಲಿದ್ದು, ಕುಟುಂಬಸ್ಥರು ಮತ್ತು ಆಪ್ತರಿಗೆ ಮಾತ್ರವಲೇ ಆಹ್ವಾನ ನೀಡಲಾಗಿದೆ.

ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ ಬದುಕಿಗೆ ಎಂಟ್ರಿ ಕೊಡಲು ಉತ್ಸುಕಳಾಗಿದ್ದೇನೆ. ಮುಂದೆಯೂ ನಾನು ಸಿನಿಮಾಗಳಲ್ಲಿ ನಟಿಸುವ ಮೂಲಕ ನಿಮ್ಮನನ್ನ ರಂಜಿಸುತ್ತೇನೆ.

ನಿಮ್ಮ ಪ್ರೀತಿ, ಬೆಂಬಲಕ್ಕೆ ಧನ್ಯವಾದಗಳು ಎಂದು ಕಾಜಲ್ ಬರೆದುಕೊಂಡಿದ್ದಾರೆ. ಕಾಜಲ್ ಮದುವೆಯ ವಿಚಾರವನ್ನು ಬಹಿರಂಗ ಪಡಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯವನ್ನು ಕೋರುತ್ತಿದ್ದಾರೆ.