Actor Shashikumar: ಮತ್ತೆ ಚುನಾವಣೆಗೆ ನಟ ಶಶಿಕುಮಾರ್ ಸಜ್ಜು: ಕ್ಷೇತ್ರ ಯಾವುದು? ಟಿಕೆಟ್ ಸಿಗುತ್ತಾ?

(Actor Shashikumar) ಈಗಾಗಲೇ ಒಮ್ಮೆ ಸಂಸದರಾಗಿರುವ ಶಶಿಕುಮಾರ್‌, ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟರಾಗಿದ್ದ ಶಶಿಕುಮಾರ್‌ ಈಗ ಬರೀ ನಟರಲ್ಲ, ರಾಜಕಾರಣೀಯೂ ಹೌದು. ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಾಗಿ ಶಶಿಕುಮಾರ್‌ ಖಾತ್ರಿಪಡಿಸಿದ್ದಾರೆ. ತಾನು ಯಾವ ಕ್ಷೇತ್ರದಲ್ಲಿ ಭಾಗವಹಿಸುತ್ತೇನೆ ಎಂಬುದರ ಬಗ್ಗೆ ಕೂಡ ಶಶಿಕುಮಾರ್‌ ತಿಳಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಅಥವಾ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ (Actor Shashikumar) ಹೇಳಿದ್ದಾರೆ. ಜಿಲ್ಲೆಯಲ್ಲಿ ಎರಡು ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀಸಲು ಕ್ಷೇತ್ರಗಳಿವೆ. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಪಕ್ಷ ನಿರ್ಧಾರ ಮಾಡುತ್ತದೆ, ಅದೇ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದರು.

ಇನ್ನೂ ಟಿಕೆಟ್ ಬಗ್ಗೆ ಹೈಕಮಾಂಡ್‌ ನಿರ್ಧಾರ ಮಾಡಲಿದೆ. ಚಳ್ಳಕೆರೆ ಮತ್ತು ಮೊಳಕಾಲ್ಮೂರು ಎರಡು ಕ್ಷೇತ್ರಗಳಲ್ಲಿ ಎಲ್ಲಿ ಟಿಕೆಟ್‌ ನೀಡಿದರೂ ನಾನು ಸ್ಪರ್ಧಿಸಿ ಗೆಲುವು ಸಾಧಿಸುತ್ತೇನೆ. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ, ಪ್ರಧಾನಿ ನರೇಂದ್ರ ಮೋದಿ ಜೀ ಯವರು ಉತ್ತಮ ಕಾರ್ಯಕ್ರಮ ನೀಡುತ್ತಿದ್ದಾರೆ. ಹಾಗಾಗಿ ನಾನು ಕೂಡ ಪಕ್ಷದಲ್ಲಿ ಸೇರ್ಪಡೆಯಾಗಿದ್ದೇನೆ. ಶ್ರೀರಾಮುಲು ಅವರು ಮೊಳಕಾಲ್ಮೂರಲ್ಲಿ ಸ್ಪರ್ಧೆ ಮಾಡಿದರೆ, ನಾನು ಚಳ್ಳಕೆರೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಶಶಿಕುಮಾರ್ ವರ್ಷದ ಆರಂಭದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದರು. 1999 ರಲ್ಲಿ ಜೆಡಿಯು ಟಿಕೆಟ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದರು. ನಂತರ ಜೆಡಿಎಸ್‌ಗೆ ಬಂದು 2004 ರಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. 2018 ರಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ ಮತ್ತೆ ಜೆಡಿಎಸ್‌ಗೆ ಮರಳಿದರು. ಇದೀಗ ಬಿಜೆಪಿಗೆ ಸೇರ್ಪಡೆಗೊಂಡಿದ್ದು ಮೊಳಕಾಲ್ಮೂರು ಅಥವಾ ಚಳ್ಳಕೆರೆಗಳಿಂದ ಟಿಕೆಟ್ ಸಿಗುವುದೆಂದು ಬಯಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧೆ ಮಾಡುವ ಪ್ರಶ್ನೇ ಇಲ್ಲ, ಪಕ್ಷದ ನಿರ್ಧಾರವೇ ಅಂತಿಮ ಎಂದಿದ್ದಾರೆ.

ಇದನ್ನೂ ಓದಿ : Liquor tragedy: ಬಿಹಾರದಲ್ಲಿ ಕಳ್ಳಭಟ್ಟಿ ದುರಂತಕ್ಕೆ 20 ಮಂದಿ ಬಲಿ; ವಿಧಾನಸಭೆಯಲ್ಲಿ ಚರ್ಚೆ, ಪ್ರತಿಪಕ್ಷಗಳ ಗದ್ದಲ

ಇದನ್ನೂ ಓದಿ : VastuDosha for congress office: ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ವಾಸ್ತು ದೋಷ : ಪರಿಹಾರಕ್ಕೆ ಮೊರೆ ಹೋದ ನಾಯಕರು

(Actor Shashikumar) Shashikumar, who is already an MP, is again active in politics as the elections draw near. Sasikumar, who was a veteran actor of Kannada film industry, is now not just an actor but also a politician. Sasikumar has assured that he will contest the elections again this time. Sasikumar also told about the field in which he will participate.

Comments are closed.