ಮಹಾರಾಷ್ಟ್ರ : Actor Swara Bhasker : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ನಿವಾಸಕ್ಕೆ ಕೊಲೆ ಬೆದರಿಕೆಯುಳ್ಳ ಪತ್ರವೊಂದು ಬಂದಿದ್ದು ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸ್ವರಾ ನೀಡಿರುವ ದೂರಿನ ಆಧಾರದ ಮೇಲೆ ದುಷ್ಕರ್ಮಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಹಿಂದಿಯಲ್ಲಿ ಬರೆಯಲಾಗಿರುವ ಪತ್ರದಲ್ಲಿ ವೀರ ಸಾರ್ವಕರ್ರಿಗೆ ಅವಮಾನ ಮಾಡುವುದನ್ನು ಈ ದೇಶದ ಯುವಕರು ಸಹಿಸುವುದಿಲ್ಲ ಎಂದು ಬರೆಯಲಾಗಿದೆ. ವರ್ಸೋವಾದಲ್ಲಿರುವ ನಟಿ ಸ್ವರಾ ಭಾಸ್ಕರ್ ನಿವಾಸಕ್ಕೆ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಜೀವ ಬೆದರಿಕೆ ಪತ್ರವನ್ನು ಸ್ವೀಕರಿಸಿದ ಬಳಿಕ ನಟಿ ಸ್ವರಾ ಭಾಸ್ಕರ್ ಎರಡು ದಿನಗಳ ಹಿಂದೆ ವರ್ಸೋವಾ ಪೊಲೀಸ್ ಠಾಣೆಗೆ ತೆರಳಿದ್ದು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಟಿ ಸ್ವರಾ ಭಾಸ್ಕರ್ ನೀಡಿರುವ ದೂರನ್ನು ಆಧರಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಹಾಗೂ ಅಪರಿಚಿತ ವ್ಯಕ್ತಿಗಳನ್ನು ಹುಡುಕಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿಯಲ್ಲಿ ಬರೆಯಲಾಗಿರುವ ಪತ್ರದಲ್ಲಿ ವೀರ ಸಾರ್ವಕರ್ಗೆ ಅವಮಾನ ಮಾಡುವುದುನ್ನು ದೇಶದ ಯುವಕರು ಸಹಿಸುವುದಿಲ್ಲ ಎಂದು ಬರೆಯಲಾಗಿದೆ. ರಾಜಕೀಯ ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಮುಕ್ತವಾಗಿ ಮಾತನಾಡುವ ನಟಿ ಸ್ವರಾ ಭಾಸ್ಕರ್ 2017ರಲ್ಲಿ ಸಾರ್ವಕರ್ ಬ್ರಿಟೀಷ್ ಸರ್ಕಾರದ ಬಳಿ ನನ್ನನ್ನು ಬಿಡುಗಡೆಗೊಳಿಸಿ ಎಂದು ಮನವಿ ಮಾಡಿದ್ದರು. ಜೈಲಿನಿಂದ ಬಿಡುಗಡೆಗೊಳಿಸಿ ಎಂದು ಕ್ಷಮೆಯಾಚಿಸಿದ್ದರು. ಹೀಗಾಗಿ ಸಾರ್ವಕರ್ ಎಂದಿಗೂ ವೀರ ಎನಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದರು. ಈ ಹಳೆಯ ಟ್ವೀಟ್ನ್ನೇ ಇಟ್ಟುಕೊಂಡು ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ.
ಇದನ್ನು ಓದಿ : Best Places For Students: ಕಾಲೇಜಿನಿಂದ ಟೂರ್ ಹೋಗುವ ಪ್ಲಾನ್ ಇದೆಯೇ ! ನಿಮಗಾಗಿ ಬೆಸ್ಟ್ ತಾಣಗಳು ಇಲ್ಲಿವೆ
ಇದನ್ನೂ ಓದಿ : ನಿನ್ನನ್ನು ನೋಡಿ ಖುಷಿಯಾಗುತ್ತಿದೆ..” ಸಚಿನ್ ಪುತ್ರನ ಬಗ್ಗೆ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಹೀಗೆ ಹೇಳಿದ್ದೇಕೆ ?
Actor Swara Bhasker Receives Death Threat In Letter, Cops Launch Probe