Upendra : ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ ವಿರುದ್ಧ ದೂರು ದಾಖಲು

ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ಅವರಿಗೆ ಸಂಕಷ್ಟ ಎದುರಾಗಿದೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿದೆ.

ನಟ ಉಪೇಂದ್ರ ಅವರು ವಿಡಿಯೋದಲ್ಲಿ, ” ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ ಅಂತ ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ಜನರು ನಟ ಉಪೇಂದ್ರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್‌ ಅವರು ದೂರು ನೀಡಿದ್ದಾರೆ.

ಇದನ್ನೂ ಓದಿ : Boys Hostel : ಹೊಸ ಟೈಟಲ್‌ನೊಂದಿಗೆ ತೆಲುಗುಗೆ ಡಬ್‌ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

ಹೀಗಾಗಿ ನಟ ಉಪೇಂದ್ರ ಅವರ ವಿರುದ್ಧ ಅಚ್ಚುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿ ನಿಂದನೆ ಕೇಸ್‌ ದಾಖಲಾದ ಬೆನ್ನಲ್ಲೇ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ನಟ ಉಪೇಂದ್ರ ಅವರು ವಿಡಿಯೋ ವೈರಲ್‌ ಬೆನ್ನಲ್ಲೇ ಎಚ್ಚೆತ್ತುಕೊಂಡು, ತಮ್ಮ ಮಾತಿನಿಂದ ಅಗಿರುವ ನೋವಿಗೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ.

Actor Upendra : File a complaint against Sandalwood real star Upendra

Comments are closed.