ನಟಿ ಸಮಂತಾಗೆ ತಾಯಿ ಆಗುವ ಸಂಭ್ರಮ?! ವೈರಲ್ ವಿಡಿಯೋ ನೋಡಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ !

ಸ್ಟಾರ್ ನಟಿ ಸಮಂತಾ ಋತ್ ಪ್ರಭು ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.

ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ನಟಿ ಸಮಂತಾ ಋತ್ ಪ್ರಭು ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಊಹಾಪೋಹಗಳು ಸಿನಿವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಇತ್ತೀಚೆಗಷ್ಟೇ ತೆರೆಕಂಡ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಚಲನಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಈ ಸಂಭ್ರಮದ ನಡುವೆಯೇ ಅವರ ಗರ್ಭಧಾರಣೆಯ ಸುದ್ದಿ ಗಾಸಿಪ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಚಿತ್ರತಂಡ ಹಾಗೂ ಪತಿಯೊಂದಿಗೆ ಸಿನಿಮಾ ಯಶಸ್ಸನ್ನು ಆಚರಿಸಿಕೊಳ್ಳುತ್ತಿರುವ ವಿಡಿಯೋಗಳು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳಲ್ಲಿ ತಿಳಿ ನೀಲಿ ಬಣ್ಣದ ಟೀ-ಶರ್ಟ್ ಧರಿಸಿರುವ ಸಮಂತಾ ಅವರ ‘ಬೇಬಿ ಬಂಪ್’ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ನೆಟ್ಟಿಗರು ಗುರುತಿಸಿದ್ದು, ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಕೆಲವು ತೆಲುಗು ಮಾಧ್ಯಮಗಳ ವರದಿಯ ಪ್ರಕಾರ, ನಟಿಯ ಆಪ್ತರು ಕೂಡ ಈ ಖುಷಿಯ ವಿಚಾರವನ್ನು ಅನಧಿಕೃತವಾಗಿ ಖಚಿತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ದಂಪತಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಇದನ್ನೂ ಓದಿ : ‘ವಿಮೆ’ ದುರಾಸೆಗೆ ಮತ್ತೊಂದು ಬಲಿ: ಮಗಳ ಕೃತ್ಯಕ್ಕೆ ಬೇಸತ್ತು ತಾಯಿ ಆತ್ಮಹತ್ಯೆ; ಒಂದೇ ಕುಟುಂಬದಲ್ಲಿ ಘನಘೋರ ದುರಂತ!

ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ನಟಿ ಸಮಂತಾ ಮತ್ತು ಪ್ರಸಿದ್ಧ ನಿರ್ದೇಶಕ ರಾಜ್ ನಿಧಿಮೋರು ಅವರು ಇಶಾ ಸೆಂಟರ್‌ನಲ್ಲಿ ಸರಳವಾಗಿ ವಿವಾಹವಾಗಿದ್ದರು. ಈ ಇಬ್ಬರು ಸೆಲೆಬ್ರಿಟಿಗಳಿಗೂ ಇದು ಎರಡನೇ ಮದುವೆಯಾಗಿದ್ದು, ಮೊದಲ ದಾಂಪತ್ಯ ಜೀವನದಿಂದ ಇಬ್ಬರಿಗೂ ಮಕ್ಕಳಿರಲಿಲ್ಲ. ತಮಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಇರುವುದಾಗಿ ಸಮಂತಾ ಈ ಹಿಂದೆ ಹಳೆಯ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಇದೀಗ ಹರಡಿರುವ ಸುದ್ದಿ ನಿಜವೇ ಆಗಿದ್ದಲ್ಲಿ, ನೆಚ್ಚಿನ ನಟಿ ಪೋಷಕರಾಗುತ್ತಿರುವ ವಿಷಯ ಕೇಳಿ ಅಭಿಮಾನಿ ಬಳಗ ಫುಲ್​ ಖುಷ್​ ಆಗಿದೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.