sanjjanaa galrani : ತಮ್ಮ ಪ್ರೆಗ್ನೆನ್ಸಿ ಜರ್ನಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಮಾಹಿತಿ ಹಂಚಿಕೊಳ್ತಿದ್ದ ನಟಿ ಸಂಜನಾ ಗಲ್ರಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಜನಾ ಗಲ್ರಾನಿ ಗಂಡು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಆದರೆ ಈ ಬಗ್ಗೆ ನಟಿ ಸಂಜನಾ ಗಲ್ರಾನಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದಾರೆ. ಅಭಿಮಾನಿಗಳ ಬಳಿಯೇ ನನಗೆ ಗಂಡು ಇಲ್ಲವೇ ಹೆಣ್ಣು ಮಗುವಿನಲ್ಲಿ ಯಾವ ಮಗು ಜನಿಸಿರಬಹುದು ಎಂಬ ಪ್ರಶ್ನೆಯನ್ನು ಇಟ್ಟಿದ್ದಾರೆ. ಸಂಜನಾ ಗಲ್ರಾನಿಗೆ ಚಿಕಿತ್ಸೆ ನೀಡಿದ ಹೈದರಾಬಾದ್ನ ಖಾಸಗಿ ಆಸ್ಪತ್ರೆಯ ವೈದ್ಯೆಯಾದ ಶಿಲ್ಪಾ ರೆಡ್ಡಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಗರ್ಭಿಣಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿದ್ದ ನಟಿ ಸಂಜನಾ ಗಲ್ರಾನಿ ತಮ್ಮ ಗರ್ಭಿಣಿ ಪಯಣದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಬೇಬಿ ಬಂಪ್ಸ್ನ ಫೋಟೋ ಶೂಟ್ಗಳು ಹಾಗೂ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅಲ್ಲದೇ ಕೆಲ ದಿನಗಳ ಹಿಂದಷ್ಟೇ ನಟಿ ಸಂಜನಾ ಗಲ್ರಾನಿ ತಮ್ಮ ಸೀಮಂತದ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.
ಗಂಡ – ಹೆಂಡತಿ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದ ಸಂಜನಾ ಬಳಿಕ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಕಾಣಿಸಿಕೊಂಡಿದ್ದ ನಟಿ ಸಂಜನಾ 2020ರ ಮೇ ತಿಂಗಳಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಡಾ.ಅಜೀಜ್ ಪಾಷಾ ಎಂಬವರನ್ನು ವರಿಸಿದ್ದರು.
ಇದನ್ನು ಓದಿ : Kerala Heavy Rainfall : ಕೇರಳದಲ್ಲಿ ಭಾರೀ ಮಳೆ : 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ಇದನ್ನೂ ಓದಿ : Navjot Singh Sidhu : ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು
actress sanjjanaa galrani and her husband azeez pasha blessed with baby boy