sanjjanaa galrani : ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ

sanjjanaa galrani : ತಮ್ಮ ಪ್ರೆಗ್ನೆನ್ಸಿ ಜರ್ನಿ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಮಾಹಿತಿ ಹಂಚಿಕೊಳ್ತಿದ್ದ ನಟಿ ಸಂಜನಾ ಗಲ್ರಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನಿಂದ ಹೈದರಾಬಾದ್​ಗೆ ತೆರಳಿ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಜನಾ ಗಲ್ರಾನಿ ಗಂಡು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


ಆದರೆ ಈ ಬಗ್ಗೆ ನಟಿ ಸಂಜನಾ ಗಲ್ರಾನಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದಾರೆ. ಅಭಿಮಾನಿಗಳ ಬಳಿಯೇ ನನಗೆ ಗಂಡು ಇಲ್ಲವೇ ಹೆಣ್ಣು ಮಗುವಿನಲ್ಲಿ ಯಾವ ಮಗು ಜನಿಸಿರಬಹುದು ಎಂಬ ಪ್ರಶ್ನೆಯನ್ನು ಇಟ್ಟಿದ್ದಾರೆ. ಸಂಜನಾ ಗಲ್ರಾನಿಗೆ ಚಿಕಿತ್ಸೆ ನೀಡಿದ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯ ವೈದ್ಯೆಯಾದ ಶಿಲ್ಪಾ ರೆಡ್ಡಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


ಗರ್ಭಿಣಿಯಾದಾಗಿನಿಂದ ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್​ ಆಗಿದ್ದ ನಟಿ ಸಂಜನಾ ಗಲ್ರಾನಿ ತಮ್ಮ ಗರ್ಭಿಣಿ ಪಯಣದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಬೇಬಿ ಬಂಪ್ಸ್​ನ ಫೋಟೋ ಶೂಟ್​ಗಳು ಹಾಗೂ ರೀಲ್ಸ್​ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು. ಅಲ್ಲದೇ ಕೆಲ ದಿನಗಳ ಹಿಂದಷ್ಟೇ ನಟಿ ಸಂಜನಾ ಗಲ್ರಾನಿ ತಮ್ಮ ಸೀಮಂತದ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.


ಗಂಡ – ಹೆಂಡತಿ ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದ ಸಂಜನಾ ಬಳಿಕ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಗ್​ ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಕಾಣಿಸಿಕೊಂಡಿದ್ದ ನಟಿ ಸಂಜನಾ 2020ರ ಮೇ ತಿಂಗಳಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಡಾ.ಅಜೀಜ್​ ಪಾಷಾ ಎಂಬವರನ್ನು ವರಿಸಿದ್ದರು.

ಇದನ್ನು ಓದಿ : Kerala Heavy Rainfall : ಕೇರಳದಲ್ಲಿ ಭಾರೀ ಮಳೆ : 12 ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

ಇದನ್ನೂ ಓದಿ : Navjot Singh Sidhu : ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು

actress sanjjanaa galrani and her husband azeez pasha blessed with baby boy

Comments are closed.