ಮಂಗಳವಾರ, ಏಪ್ರಿಲ್ 29, 2025
HomeCinemaAindrila Sharma no more: 20 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ನಟಿ ಐಂದ್ರಿಲಾ ಶರ್ಮಾ...

Aindrila Sharma no more: 20 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ನಟಿ ಐಂದ್ರಿಲಾ ಶರ್ಮಾ ಕೊನೆಯುಸಿರು

- Advertisement -

ಕೋಲ್ಕತ್ತಾ: Aindrila Sharma no more: ಕಳೆದ 20 ದಿನಗಳಿಂದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬಂಗಾಳಿ ನಟಿ ಐಂದ್ರಿಲಾ ಶರ್ಮಾ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ: Amulya Jagdish couple : ತಿರುಪತಿ ತಿಮ್ಮಪ್ಪನಿಗೆ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್‌ ದಂಪತಿ

ನವೆಂಬರ್ 1ರಂದು ಐಂದ್ರಿಲಾ ಶರ್ಮಾ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ನವೆಂಬರ್ 14ರಂದು ನಟಿಗೆ ಹಲವು ಬಾರಿ ಹೃದಯ ಸ್ತಂಭನ ಉಂಟಾಗಿತ್ತು. ಕೂಡಲೇ ಅವರನ್ನು ಸಿಪಿಆರ್ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಕಳೆದ 4 ದಿನಗಳಿಂದ ವೆಂಟಿಲೇಟರ್ ನಲ್ಲಿದ್ದ ನಟಿ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಅಂದಹಾಗೆ ಐಂದ್ರಿಲಾ ಶರ್ಮಾ ಈ ಹಿಂದೆ ಎರಡೆರಡು ಬಾರಿ ಮಾರಕ ಕ್ಯಾನ್ಸರ್ ಗೆ ತುತ್ತಾಗಿದ್ದರು. ಕ್ಯಾನ್ಸರ್ ವಿರುದ್ಧ ಧೈರ್ಯವಾಗಿ ಹೋರಾಡಿ ಸಂಪೂರ್ಣ ಗುಣಮುಖರಾಗಿದ್ದ ಅವರು ಇಂಟ್ರಾಕ್ರೇನಿಯಲ್ ಹೆಮ್ರೇಜ್ (ಮೆದುಳಿನಲ್ಲಿ ರಕ್ತನಾಳ ಒಡೆಯುವುದು) ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಅವರು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಇನ್ನು ಯಾವುದೇ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಐಂದ್ರಿಲಾ ಅವರ ಗೆಳೆಯ/ನಟ ಸಬ್ಯಸಾಚಿ ಚೌಧರಿ ನಟಿಯ ಆರೋಗ್ಯಕ್ಕಾಗಿ ಪ್ರಾರ್ಥಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದರು. ಆದರೆ ಎರಡೆರಡು ಬಾರಿ ಕ್ಯಾನ್ಸರ್ ಗೆದ್ದು ಬಂದ ನಟಿ ಹೃದಯಾಘಾತಕ್ಕೆ ತುತ್ತಾಗಿದ್ದು, ಕೇವಲ 24ನೇ ವಯಸ್ಸಿಗೆ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅವರ ನಿಧನಕ್ಕೆ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: Naga Shaurya Wedding : ಕುಂದಾಪುರದ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

ಪಶ್ಚಿಮ ಬಂಗಾಳದ ಬರ್ಹಾಂಪೋರ್ ಮೂಲದ ನಟಿ ಐಂದ್ರಿಲಾ ಶರ್ಮಾ ಬಂಗಾಳಿಯ ಪ್ರಸಿದ್ಧ ನಟಿ. ಝೂಮರ್ ಟಿವಿ ಶೋ ಮೂಲದ ಬಣ್ಣದ ಬದುಕಿಗೆ ಕಾಲಿಟ್ಟಿದ್ದ ಅವರು ಮಹಾಪೀಠ್ ತಾರಾಪೀಠ್, ಜೀವನ್ ಜ್ಯೋತಿ, ಜಿಯೋನ್ ಕತಿ ಮುಂತಾದ ಹಲವಾರು ಟಿವಿ ಶೋಗಳನ್ನು ನಡೆಸಿಕೊಟ್ಟಿದ್ದರು. ಅಮಿ ದೀದಿ ನಂಬರ್ 1, ಲವ್ ಕೆಫೆ ಎಂಬ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಕ್ಯಾನ್ಸರ್ ಗೆದ್ದ ಬಳಿಕವೂ ಅವರು ವೃತ್ತಿ ಜೀವನಕ್ಕೆ ಮರಳಿ ಹಲವು ಟಿವಿ ಶೋಗಳನ್ನು ನಡೆಸಿಕೊಟ್ಟಿದ್ದರು.

Aindrila Sharma no more: Bengali actress Aindrila Sharma passes away at the age of 24

RELATED ARTICLES

Most Popular