ಬುಧವಾರ, ಜೂನ್ 18, 2025
HomeBreakingನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್

ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್

- Advertisement -

ಮುಂಬೈ: ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.

Maks Infotech Web1

ಪತಿ ಹಾಗೂ ಮಾವನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಐಶ್ವರ್ಯ, ಪುತ್ರಿ ಆರಾಧ್ಯಾ ಹಾಗೂ ಅತ್ತೆ ಜಯಾ ಬಚ್ಚನ್ ಅವರಿಗೂ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಮೂವರ ವರದಿ ಬಂದಿದ್ದು, ಐಶ್ವರ್ಯಾ ಹಾಗೂ ಆರಾಧ್ಯಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಜಯಾ ಬಚ್ಚನ್ ಅವರಿಗೆ ನೆಗಟಿವ್ ಬಂದಿದೆ.

Aishwarya Rai 1

ಈ ನಡುವೆ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular