BIG NEWS : ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಗಂಭೀರ, ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥಗೊಂಡಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

98 ವರ್ಷದ ದಿಲೀಪ್ ಕುಮಾರ್ ಅವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು. ಆದ್ರೆ ಇಂದು ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಖ್ಯಾತ ವೈದ್ಯರಾದ ಡಾ.ನಿತಿನ್ ಗೋಖಲ್ ಮತ್ತು ಡಾ.ಜಲೀಲ್ ಪಾರ್ಕರ್ ಅವರ ನೇತೃತ್ವದ ವೈದ್ಯರ ತಂಡ ದಿಲೀಪ್ ಕುಮಾರ್ ಅವರಿಗೆ ಚಿಕಿತ್ಸೆಯನ್ನು ನೀಡುತ್ತಿದೆ. ಆಸ್ಪತ್ರೆಯ ವೈದ್ಯರು ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಬಾಲಿವುಡ್ ನ ಖ್ಯಾತ ಸಿನಿಮಾಗಳಾದ ಮೋಘಲ್ ಎ ಅಜಮ್, ರಾಮ್ ಔರ್ ಶ್ಯಾಮ್, ಕೋಹಿನೂರ್, ಶಕ್ತಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುವ ಮೂಲಕ ದಿಲೀಪ್ ಕುಮಾರ್ ಜನಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.

Comments are closed.