- ಸುಶ್ಮಿತಾ ಸುಬ್ರಹ್ಮಣ್ಯ
ಮುಂಬೈ : ನಟಿ ಶಿಲ್ಪಾ ಶೆಟ್ಟಿಯ ಕುಟುಂಬ ಒಂದರ ಹಿಂದೆ ಒಂದು ಸಂಕಷ್ಟವನ್ನು ಎದುರಿಸುತ್ತಿದೆ. ಮೊದಲು ಅಶ್ಲೀಲ ಸಿನಿಮಾಗಳ ನಿರ್ಮಾಣ ಹಾಗೂ ಮೊಬೈಲ್ ಅಪ್ಲಿಕೇಷನ್ಗಳಲ್ಲಿ ಅವುಗಳ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಹಾಗೂ ಶಿಲ್ಪಾ ಶೆಟ್ಟಿ ಅವರ ಗಂಡ ರಾಜ್ ಕುಂದ್ರಾ ನ್ಯಾಯಾಂಗ ಬಂಧನದಲ್ಲಿದ್ದಾರೆ.. ಇದರ ಜೊತೆ ಈ ಕುಟುಂಬಕ್ಕೆ ಇನ್ನೋಂದು ಕಂಟಕ ಶುರುವಾಗಿದೆ.

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್ ಆದ ಬೆನ್ನಲೇ. ಶಿಲ್ಪಾಗೂ ಆತಂಕ ಶುರುವಾಗಿದೆ. ಶಿಲ್ಪಾ ಶೆಟ್ಟಿ ಹಾಗೂ ಇವರ ತಾಯಿ ಸುನಂದಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ತಾಯಿ ಮತ್ತು ಮಗಳು ಸೇರಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ ಎಂದು ವರದಿಗಳು ತಿಳಿಸಿವೆ.

ಶಿಲ್ಪಾ ಶೆಟ್ಟಿ ಇವೋಸಿಸ್ ವೆಲ್ ನೆಸ್ ಫಿಟ್ನೆಸ್ ಕೇಂದ್ರವನ್ನು ನಡೆಸುತ್ತಿದ್ದರು . ಈ ಸಂಸ್ಥೆಗೆ ನಟಿ ಶಿಲ್ಪಾ ಶೆಟ್ಟಿ ಅವರೇ ಮುಖ್ಯಸ್ಥೆ. ಅವರ ತಾಯಿ ಸುನಂದಾ ಶೆಟ್ಟಿ ನಿರ್ದೇಶಕಿ ಆಗಿದ್ದಾರೆ. ಇದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಾಂತರ ರೂಪಾಯಿಯನ್ನು ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ವಂಚನೆಯ ಆರೋಪ ಹಾಗೂ ಇದರ ಕುರಿತು ಜೋಸ್ನಾ ಚೌಹಾಣ್ ಮತ್ತು ರೋಹಿತ್ ವೀರ್ ಸಿಂಗ್ ಎಂಬುವವರು ಲಖನೌ ಹಜರತ್‌ಗಂಜ್ ಮತ್ತು ವಿಭೂತಿ ಖಂಡ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಂದು ವರದಿಯಾಗಿದೆ. ಅಲ್ಲದೇ ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೋಲಿಸರು ಮುಂಬೈಗೆ ಆಗಮಿಸಿದ್ದಾರೆ.

ಲಖನೌ ಪೋಲಿಸರು ಮುಂಬೈಗೆ ಆಗಮಿಸಿದ್ದು ಅಲ್ಲದೇ ಈ ಪ್ರಕರಣದ ಬಗ್ಗೆ ತನಿಖೆ ಪ್ರರಂಭಿಸಿದ್ದಾರೆ ಎಂಬ ಮಾಹಿತಿಗಳು ತಿಳಿದು ಬಂದಿದೆ. ಒಂದು ವೇಳೆ ಶಿಲ್ಪಾ ಶೆಟ್ಟಿ ಮೋಸ ಮಾಡಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಿದ ತಕ್ಷಣ ಅವರನ್ನು ಪೋಲಿಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎನೇ ಆಗಲೀ ಶಿಲ್ಪಾ ಶೆಟ್ಟಿ ಕುಟುಂಕ್ಕೆ ಒಂದರ ಹಿಂದೆ ಒಂದು ಸಂಕಷ್ಟ ಬಂದಿರುವುದಂತು ನಿಜ.