ವೆಲ್ ನೆಸ್ ಸೆಂಟರ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಾಲಿವುಡ್ ನಟಿ, ಕರಾವಳಿ ಬೆಡಗಿ, ಉದ್ಯಮ ರಾಜ್ ಕುಂದ್ರಾ ಪತ್ನಿ ಶಿಲ್ಪಾ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

IOSIS ವೆಲ್ ನೆಸ್ ಸೆಂಟರ್ ಫ್ರ್ಯಾಂಚೈಸಿ ಆರಂಭಿಸುವುದಾಗಿ ಶಿಲ್ಪಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ಕೋಟ್ಯಾಂತರ ರೂಪಾಯಿ ಹಣ ಪಡೆದಿದ್ದರು. ಆದರೆ ಇದುವರೆಗೂ ಫ್ರ್ಯಾಂಚೈಸಿ ಆರಂಭಿಸಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟಿ ಶಿಲ್ಪಾ ಶೆಟ್ಟಿಗೆ ನೊಟೀಸ್ ಜಾರಿಯಾಗಿದೆ.

ಈ ಬಗ್ಗೆ ವಿವರಣೆ ನೀಡಿರು ಲಕ್ನೋಪೊಲೀಸ್ ಕಮೀಷನರ್ ಫ್ರಾಂಚೈಸಿ ಡೀಲ್ ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಆಯ್ಓಎಸ್ಆಯ್ಎಸ್ ವೆಲ್ ನೆಸ್ ಸೆಂಟರ್ ನ ಜ್ಯೋತ್ಸ್ನಾ ಚೌಹಾಣ್ ಮ್ಯಾನೇಜರ್ ಹಾಗೂ ವೀರ್ ಸಿಂಗ್ ಎಂಬುವವರು ದೂರು ನೀಡಿದ್ದಾರೆ ಎಂದಿದ್ದಾರೆ.

ಈ ಮಧ್ಯೆ ಆಯ್ಓಎಸ್ಆಯ್ಎಸ್ ಸೆಂಟರ್ ನ ಚೇರ್ ಪರ್ಸನ್ ಕಿರಣ ಬಾವಾ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಹಾಗೂ ಸುನಂದಾ ಶೆಟ್ಟಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.