Legendary actor Dilip Kumar : ಬಾಲಿವುಡ್‌ ದಂತಕಥೆ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ

ಮುಂಬೈ : ಬಾಲಿವುಡ್ ದಂತಕಥೆ ಹಿರಿಯ ನಟ ದಿಲೀಪ್ ಕುಮಾರ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ದಿಲೀಪ್ ಕುಮಾರ್ ಅವರನ್ನು ಮೊದಲ ಬಾರಿಗೆ ಜೂನ್ 6 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನುಐಸಿಯುನಲ್ಲಿ ವೆಂಟಿಲೇಟರ್‌ ಸಹಾಯದಲ್ಲಿ ಇರಿಸಲಾಗಿತ್ತು. ದಿಲೀಪ್ ಕುಮಾರ್ ಕಳೆದ ಕೆಲವು ವರ್ಷಗಳಿಂದಲೂ ಮೂತ್ರಪಿಂಡದ ಸಮಸ್ಯೆ, ನ್ಯುಮೋನಿಯಾದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ದಿಲೀಪ್ ಕುಮಾರ್ ಅವರ ಪತ್ನಿ ಸೈರಾ ಬಾನು 50 ವರ್ಷ ವಯಸ್ಸಿನವರಾಗಿದ್ದಾರೆ.

ನಯೌ ದೌರ್, ಮೊಘಲ್-ಎ-ಅಜಮ್, ದೇವದಾಸ್, ರಾಮ್ ಔರ್ ಶ್ಯಾಮ್, ಅಂಡಾಜ್, ಮಧುಮತಿ ಮತ್ತು ಗಂಗಾ ಜಮುನಾ ಸೇರಿದಂತೆ ಭಾರತೀಯ ಚಿತ್ರರಂಗದ ಪ್ರಸಿದ್ದ ಸಿನಿಮಾಗಳಲ್ಲಿ ದಿಲೀಪ್ ಕುಮಾರ್ ನಟಿಸಿದ್ದರು. ಸುಮಾರು 40 ವರ್ಷಗಳ ಕಾಲ ಬಾಲಿವುಡ್‌ ನಟರಾಗಿ ಮೆರೆದಿದ್ದ ದಿಲೀಪ್‌ ಕುಮಾರ್‌ ಬಹು ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ದಿಲೀಪ್‌ ಕುಮಾರ್‌ ಅವರ ನಿಧನಕ್ಕೆ ಬಾಲಿವುಡ್‌ ದಿಗ್ಗಜರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.

Comments are closed.