ಮುಂಬೈ: ಅಶ್ಲೀಲ ಚಿತ್ರಗಳನ್ನುನಿರ್ಮಾಣದ ಆರೋಪ ಹಿನ್ನೆಲೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು ದೊರೆತಿದೆ. ಎರಡು ತಿಂಗಳ ಬಳಿಕ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದ್ದು, ಕರೆದಾಗ ಹಾಜರಾಗುವಂತೆಯೂ ಸೂಚನೆ ನೀಡಿದೆ.
ಜುಲೈ 19ರಂದು ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಪ್ರಮುಖವಾಗಿ ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಮೊಬೈಲ್ ಆಪ್‌ಗಳಲ್ಲಿ ಅಪ್ಲೋಡ್ ಮಾಡಿದ ಆರೋಪ ಎದುರಿಸುತ್ತಿದ್ದರು. ರಾಜ್ ಕುಂದ್ರಾ ಬಂಧನ ಬೆನ್ನಲ್ಲೇ ಹಲವು ನಟಿಯರು ಶಿಲ್ಪಾ ಶೆಟ್ಟಿ ಪತಿಯ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು1,400 ಪುಟಗಳ ಚಾರ್ಜ್‌ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಹಿಂದೆಯೇ ರಾಜ್ ಕುಂದ್ರಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ ಕೂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಪುರಸ್ಕಾರ ಮಾಡಿರಲಿಲ್ಲ. ಇದೀಗ ರಾಜ್ ಕುಂದ್ರಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಷರತ್ತುಬದ್ದ ಜಾಮೀನು ನೀಡಿದೆ.
ನ್ಯಾಯಾಲಯ 50 ಸಾವಿರ ರೂಪಾಯಿ ಶ್ಯೂರಿಟಿ, ವೈಯಕ್ತಿಕ ಬಾಂಡ್, ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧಿಸಿದೆ. ಹೀಗಾಗಿ ರಾಜ್ ಕುಂದ್ರಾ ಎರಡು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಇದನ್ನೂ ಓದಿ : ಬಗೆದಷ್ಟು ಬಯಲಾಗ್ತಿದೆ ಕುಂದ್ರಾ ರಹಸ್ಯ : 121 ಅಶ್ಲೀಲ ವೀಡಿಯೊ, 1.2 ಮಿ. ಡಾಲರ್‌ಗೆ ಮಾರಾಟಕ್ಕೆ ಪ್ಲ್ಯಾನ್..!
ಇದನ್ನೂ ಓದಿ : ನೀಲಿ ಚಿತ್ರ ನಿರ್ಮಾಣ : ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಅರೆಸ್ಟ್
( Shilpa Shetty husband Raj Kundra gets Bail in after 2 month in Pornography films case )