ಬೆಂಗಳೂರು : ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಸ್ಥಿತಿ ಗಂಭೀರವಾಗಿದೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಕಾಶ್ ಅವರನ್ನು ಕಳೆದ ಶನಿವಾರ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಲವು ಸಮಯಗಳಿಂದಲೂ ಬುಲೆಟ್ ಪ್ರಕಾಶ್ ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ ಸುಮಾರು 325 ಸಿನಿಮಗಳಲ್ಲಿ ನಟಿಸಿರೊ ಬುಲೆಟ್ ಪ್ರಕಾಶ್, ದರ್ಶನ್, ಪುನಿತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಸುದೀಪ್ ಹಾಗೂ ಉಪೇಂದ್ರ ಅವರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. ಕಳೆದೈದು ತಿಂಗಳ ಹಿಂದೆ ಸುಮಾರು 35 ಕೆ.ಜಿ.ತೂಕ ಕಡಿಮೆ ಮಾಡಿಕೊಂಡು ಅನಾರೋಗ್ಯಕ್ಕೆ ತುತ್ತಾಗಿದ್ದರು.