ಸರಿಗಮಪ ರಿಯಾಲಿಟಿ ಶೋ ಸಂಘಟಕರ ವಿರುದ್ದ ಪ್ರಕರಣ ದಾಖಲು

ಬೆಂಗಳೂರು : ಕನ್ನಡದ ಖ್ಯಾತ ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಯಶಸ್ಸಿಯಾಗಿ ಮುಕ್ತಾಯವನ್ನು ಕಂಡಿದೆ. ಆದರೆ ಸರಿಗಮಪ ಫೈನಲ್ಸ್ ಮುಕ್ತಾಯವಾಗುತ್ತಿದ್ದಂತೆಯೇ ಕಾರ್ಯಕ್ರಮದ ಸಂಘಟಕರ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಭಾನುವಾರ ಸರಿಗಮಪ ರಿಯಾಲಿಟಿ ಶೋನ ಫೈನಲ್ ಸುತ್ತಿನ ಸ್ಪರ್ಧೆಗಳು ನಡೆದಿತ್ತು. ಆದರೀಗ ಕೊರೊನಾ ಸೋಂಕು ತಡೆಗೆ ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಕೇಳಿಬಂದಿದೆ.100 ಮಂದಿ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಅದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಸೇರಿದ್ದರು.

ಹಲವರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ನ್ಯಾಯಾಲಯ ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಿದ್ದಾರೆ.

ಸರಿಗಮಪ ರಿಯಾಲಿಟಿ ಶೋನ ಫೈನಲ್ ಸುತ್ತಿನ ವೇಳೆಯೇ ನಿಯಮ ಉಲ್ಲಂಘನೆ ಮಾಡಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು

Comments are closed.