ಆಷಾಢ ಶುಕ್ರವಾರ : ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್

0

ಮೈಸೂರು : ಕೊರೊನಾ ವೈರಸ್ ಭೀತಿಯಿಂದ ಐದು ದಿನಗಳ ಕಾಲ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಐದು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಆಷಾಢ ಮಾಸದ ಮೂರನೇ ಶುಕ್ರವಾರ ಆಗಿದ್ದರಿಂದ ಚಾಮುಂಡಿ ಬೆಟ್ಟದಲ್ಲಿ ಸರಳ ಹಾಗೂ ಸಾಂಪ್ರದಾಯಿಕ ಪೂಜೆಯನ್ನು ಮಾತ್ರ ಮಾಡಲಾಗಿದೆ. ಹೀಗಾಗಿ ನಟ ದರ್ಶನ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆವರಣದಲ್ಲೇ ಚಾಮುಂಡಿ ತಾಯಿ ಉತ್ಸವ ನಡೆದಿದ್ದು, ಈಗಾಗಲೇ ಪೂಜಾ ಕೈಂಕರ್ಯಗಳು ಮುಕ್ತಾಯವಾಗಿದೆ. ನಟ ದರ್ಶನ್ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದುಕೊಂಡಿದ್ದಾರೆ.

Leave A Reply

Your email address will not be published.