ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಚಿರಂಜೀವಿ ಸರ್ಜಾ ಅವರನ್ನ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುವ ಸಾಧ್ಯತೆಯಿದೆ.

ಕನ್ನಡ ಖ್ಯಾತ ನಟರಾಗಿರುವ ಚಿರಂಜೀವಿ ಸರ್ಜಾ ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ವರದನಾಯಕ, ಕೆಂಪೇಗೌಡ, ಚಂದ್ರಲೇಖ, ಅಜಿತ್, ರುದ್ರತಾಂಡವ, ಆಟಗಾರ, ರಾಮಲೀಲಾ, ಭರ್ಜರಿ, ಅಮ್ಮ ಐ ಲವ್ ಯು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸ್ಯಾಂಡಲ್ ವುಡ್ ಖ್ಯಾತ ನಟಿ ಮೇಘನಾ ರಾಜ್ ಅವರನ್ನು ವಿವಾಹವಾಗಿದ್ದ ಚಿರಂಜೀವಿ ಸರ್ಜಾ ಬೆಂಗಳೂರಿನ ವಾಸವಾಗಿದ್ದಾರೆ.