Darshan Thoogudeepa wife Vijayalakshmi : ಉಡುಪಿ : ಕರ್ನಾಟಕ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ್‌ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ (Vijayalakshmi) ಅವರು ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇಂದು ದೇವಾಲಯದಲ್ಲಿ ದರ್ಶನ್‌ಗಾಗಿ ನವಚಂಡಿಕಾ ಹೋಮ, ಪಾರಾಯಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸ್ಯಾಂಡಲ್‌ವುಡ್ ಖ್ಯಾತ ನಟ, ಡಿಬಾಸ್ ದರ್ಶನ್, ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಜೊತೆ ಕೊಲೆ ಪ್ರಕರಣದಲ್ಲಿ ಬಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 18 ಮಂದಿ ಜೈಲು ಸೇರಿದ್ದಾರೆ.
ಇದನ್ನೂ ಓದಿ : ಹೊಸಶೈಲಿಯ ಕನ್ನಡ ಸಿನಿಮಾ ಸಾ೦ಕೇತ್ ಜುಲೈ 26 ಕ್ಕೆ ರಿಲೀಸ್
ಪತಿ ದರ್ಶನ್ ತೂಗುದೀಪ್ ಬಿಡುಗಡೆಗೆ ಶ್ರಮಿಸುತ್ತಿರುವ ಪತ್ನಿ ವಿಜಯಲಕ್ಷ್ಮೀ ಕಾನೂನು ಹೋರಾಟದ ಜೊತೆಗೆ ಇದೀಗ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಮೊರೆ ಹೋಗಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ : Sonu Gowda : ಯಾರೀ ಸೋನು ಗೌಡ ? ಟಿಕ್ ಟಾಕ್ ಸ್ಟಾರ್ ಸೋನುಶ್ರೀನಿವಾಸ್ ಗೌಡ ಅಸಲಿಯತ್ತೇನು ! ಇಲ್ಲಿದೆ Exclusive ಸ್ಟೋರಿ
ಕೊಲ್ಲೂರು ಮೂಕಾಂಬಿಕೆಗೆ ಅತ್ಯಂತ ಪ್ರಿಯವಾಗಿರುವುದು ನವಚಂಡಿಕಾ ಹೋಮ. ಇದೀಗ ತಮಗೆ ಎದುರಾಗಿರುವ ಸಂಕಷ್ಟಗಳನ್ನು ಪರಿಹಾರ ಮಾಡುವಂತೆ ನವಚಂಡಿಕಾ ಹೋಮ ನಡೆಸುತ್ತಿದ್ದಾರೆ. ನಟ ದರ್ಶನ್ ಜೈಲು ಸೇರಿದ ಬಳಿಕ ಪದೇ ಪದೇ ಜೈಲಿಗೆ ತೆರಳಿ ಪತಿಯ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ : ದರ್ಶನ್ ಬಂಧನದಿಂದ ನಿರ್ಮಾಪಕರಿಗೆ ಸಂಕಷ್ಟ : ದರ್ಶನ್ ಸಿನಿಮಾಕ್ಕಾಗಿ ಪಡೆದ ಹಣ ಎಷ್ಟು ಗೊತ್ತಾ ?
ಕಳೆದ ಎರಡು ದಿನಗಳ ಹಿಂದೆಯಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡಿದ್ದರು. ಇದು ರಾಜ್ಯದಾದ್ಯಂತ ಭಾರೀ ಸುದ್ದಿ ಮಾಡಿತ್ತು. ವಿಜಯಲಕ್ಷ್ಮೀ ಜೈಲಿಗೆ ಭೇಟಿ ನೀಡಿ ಬಂದ ಬೆನ್ನಲ್ಲೇ ಸ್ಯಾಂಡಲ್‌ವುಡ್ ನಟ, ನಟಿಯರು ಜೈಲಿಗೆ ತೆರಳಿ ದರ್ಶನ್ ತೂಗುದೀಪ್ ಭೇಟಿ ಮಾಡುತ್ತಿದ್ದಾರೆ.
Darshan Thoogudeepa wife Vijayalakshmi Visit Kollur Nava Chandika Homa