ಕೂಲ್ ಕ್ಯಾಪ್ಟನ್ ಎಂದೇ ಪ್ರಖ್ಯಾತಿ ಪಡೆದಿರುವ ಧೋನಿ ಅವರು ಇಂಡಿಯಾ ಕ್ರಿಕೆಟ್ ಟೀಮ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹಾಗೆಯೇ ಮಹೇಂದ್ರ ಸಿಂಗ್ ಧೋನಿ ಹಾಗೂ ಸಾಕ್ಷಿ ‘ಧೋನಿ ಎಂಟರ್ಟೈನ್ಮೆಂಟ್ಸ್’ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿರೋದು ಗೊತ್ತೇ ಇದೆ. ಇಂದು ‘ಧೋನಿ ಎಂಟರ್ಟೈನ್ಮೆಂಟ್ಸ್’ ಮೊದಲ ತಮಿಳು ಸಿನಿಮಾ ‘ಲೆಟ್ಸ್ ಗೆಟ್ ಮ್ಯಾರೀಡ್’ (Let’s Get Married movie) ಮುಹೂರ್ತ ನೆರವೇರಿದೆ. ಮುಹೂರ್ತ ಕಾರ್ಯಕ್ರಮಕ್ಕೆ ಸಾಕ್ಷಿ ಹಾಗೂ ಹಲವು ಸೆಲೆಬ್ರಿಟಿಗಳು ಭಾಗಿಯಾಗಿ ಸಿನಿತಂಡಕ್ಕೆ ಶುಭ ಹಾರೈಸಿದ್ದಾರೆ.
‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾಕ್ಕೆ ರಮೇಶ್ ತಮಿಲ್ಮನಿ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಮೊದಲ ಸಿನಿಮಾವಾಗಿದೆ. ನಿರ್ದೇಶನದ ಜೊತೆಗೆ ಸಿನಿಮಾಕ್ಕೆ ಸಂಗೀತ ನಿರ್ದೇಶನವನ್ನು ತಾವೇ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಹರೀಶ್ ಕಲ್ಯಾಣ್, ನಾದಿಯಾ ಹಾಗೂ ಇವಾನ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದು, ಖ್ಯಾತ ಕಾಮಿಡಿಯನ್ ಯೋಗಿ ಬಾಬು ಒಳಗೊಂಡ ಬಹು ತಾರಾಗಣವಿದೆ. ಇನ್ನು ಈ ಸಿನಿಮಾ ಹೇಗೆ ಮೂಡಿ ಬರಲಿದೆ ಎನ್ನುವ ನಿರೀಕ್ಷೆ ಎಲ್ಲರಲ್ಲೂ ಮೂಡಿದೆ.

ಇದನ್ನೂ ಓದಿ : ಥಿಯೇಟರ್ನಲ್ಲಷ್ಟೇ ಅಲ್ಲ.. ಕಿರುತೆರೆಯಲ್ಲೂ ಇತಿಹಾಸ ಸೃಷ್ಟಿಸಿದ ‘ಕಾಂತಾರ’ : ಎಲ್ಲಾ ಪಂಜುರ್ಲಿ ಮಹಿಮೆ!
ಇದನ್ನೂ ಓದಿ : ಅಪರೂಪಕ್ಕೆ ರಾಕಿಂಗ್ ಸ್ಟಾರ್ ಯಶ್ ದರ್ಶನ : ಅಭಿಮಾನಿಗಳು ಕೇಳಿದ್ದು ಒಂದೇ ಪ್ರಶ್ನೆ!
ಇದನ್ನೂ ಓದಿ : Srinivas Murthy :ಸೌತ್ ಇಂಡಿಯಾ ಸಿನಿಮಾಗಳ ಜನಪ್ರಿಯ ಡಬ್ಬಿಂಗ್ ಕಲಾವಿದ ವಿಧಿವಶ

‘ಲೆಟ್ಸ್ ಗೆಟ್ ಮ್ಯಾರೀಡ್’ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಸಿನಿಮಾವಾಗಿದ್ದು, ಸಾಕ್ಷಿ ಧೋನಿ ಸಿನಿಮಾದ ಕಥೆ ಹಾಗೂ ಕಾನ್ಸೆಪ್ಟ್ ಹಿಂದಿನ ಶಕ್ತಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಕಂಟೆಂಟ್ನ್ನು ಒಳಗೊಂಡ ಇನ್ನೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಾಣ ಮಾಡಲು ನಾವು ಯೋಜನೆ ಹಾಕಿಕೊಂಡಿದ್ದೇವೆ ಎಂದು ಸಾಕ್ಷಿ ತಿಳಿಸಿದ್ದಾರೆ. ನಿರ್ದೇಶಕ ರಮೇಶ್ ತಮಿಲ್ಮನಿ ಮಾತನಾಡಿ ನಾವು ಇಂದು ಈ ಜರ್ನಿ ಆರಂಭಿಸಲು ತುಂಬಾ ಉತ್ಸುಕರಾಗಿದ್ದೇವೆ. ಮನರಂಜನಾತ್ಮಕ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಇಡೀ ಫ್ಯಾಮಿಲಿ ಕುಳಿತು ಎಂಜಾಯ್ ಮಾಡಬಹುದು ಎಂಬ ಭರವಸೆ ನಾನು ನೀಡುತ್ತೇನೆ ಎಂದು ತಿಳಿಸಿದ್ದಾರೆ.
Dhoni Entertainments first Tamil movie ‘Let’s Get Married’ title fix