ಡಾ. ವಿಷ್ಣುವರ್ಧನ್‌ ಸ್ಮಾರಕ ಲೋಕಾರ್ಪಣೆ : ಸಾಮಾಜಿಕ ಜಾಲತಾಣಗಳಲ್ಲಿ ನಟ ಅನಿರುದ್ದ ಹೀಗಂದಿದ್ಯಾಕೆ?

ಸಾಹಸಸಿಂಹ ವಿಷ್ಣುವರ್ಧನ್‌ ಅವರ ಸ್ಮಾರಕ ಜನವರಿ 29ರಂದು ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಸಮೀಪದಲ್ಲಿ ನಿರ್ಮಾಣವಾಗಿರುವ ಡಾ. ವಿಷ್ಣುವರ್ಧನ್ ಭವ್ಯ ಸ್ಮಾರಕ ಲೋಕಾರ್ಪಣೆಗೆ ಸಿದ್ಧವಾಗಿದೆ. ಅದಕ್ಕೂ ಮೊದಲು ಡಾ. ವಿಷ್ಣುವರ್ಧನ್‌ ಅವರ ಅಳಿಯ ಅನಿರುದ್ಧ (actor Anirudda) ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬಾಲಣ್ಣ ಅವರ ಕುಟುಂಬದವರ ಬಗ್ಗೆ ಹೇಳಿಕೊಂಡಿದ್ದಾರೆ.

ನಟ ಅನಿರುದ್ಧ, “ಅಭಿಮಾನ ಸ್ಟುಡಿಯೋದಲ್ಲಿ ಅಭಿಮಾನಿಗಳು ಪೂಜೆ ಇತ್ಯಾದಿ ಮಾಡಿಕೊಂಡು ಬರಲಿ, ನಮಗೆ ಯಾವತ್ತೂ ಅಭ್ಯಂತರ ಇರಲಿಲ್ಲ, ಇರೋದೂ ಇಲ್ಲ. ಇದ್ದಿದ್ದಿರೆ ಅಭಿಮಾನಿಗಳಿಗೆ ಇಷ್ಟು ವರ್ಷ ಪೂಜೆ ಇತ್ಯಾದಿ ಮಾಡಿಕೊಂಡು ಬರೋದಕ್ಕೆ ಅವಕಾಶಾನೇ ಸಿಗುತ್ತಿರಲಿಲ್ಲ. ನಮ್ಮ ಅಭ್ಯಂತರಾನೇ ಇಲ್ಲ ಅಂದಮೇಲೆ ನಮ್ಮ ಅನುಮತಿ ಯಾತಕ್ಕೆ? ಅನುಮತಿ ಕೊಡಬೇಕಾಗಿರೋದು ಬಾಲಣ್ಣರವರ ಮಕ್ಕಳು ಅಭಿಮಾನಿಗಳಿಗೆ. ಅಭಿಮಾನಿಗಳೇ! ಅವರ ಅನುಮತಿ ಪಡೆದುಕೊಳ್ಳಿ, ನೆನಪಿಡಿ ಅದು ಅವರ ಜಾಗ, ಎಲ್ಲಾ ಸಮಸ್ಯೆ ಬಗೆಹರಿಯತ್ತೆ ಹಾಗೇನೆ ನಾವು ಯಾವತ್ತೂ ಕೂಡ ಅದು ತೆರವು ಆಗೋದಕ್ಕೆ ಬಯಸಲಿಲ್ಲ ಬಯಸೋದೂ ಇಲ್ಲ.

ಆದರೆ ಬಾಲಣ್ಣರವರ ಕುಟುಂಬದವರ ಅಪೇಕ್ಷೆ ಈಗ ಏನು? 10 ಗುಂಟೆ ಅವತ್ತು ಯಾಕೆ ಕೊಡಲಿಲ್ಲ? 6 1/2 ವರ್ಷಗಳು ಕೇಳಿ, ಕೇಳಿ, ಎಷ್ಟೇ, ಹೇಗೆೇ ಪ್ರಯತ್ನ ಪಟ್ಟರೂ, ಆಗ ಅವರು ಮನಸ್ಸು ಮಾಡಲಿಲ್ಲ, ಅಪ್ಪಾವರನ್ನ, ಅಮ್ಮಾವರನ್ನ ಅವಮಾನ ಮಾಡಿದ್ದಾರೆ. ಕೊನೆಗೆ ಸರಕಾರನೇ ಬೇರೆಕಡೆ ಮಾಡಿ ಅಂತ ಹೇಳಿದ ಮೇಲೆ ನಾವು ನಿರ್ಧಾರ ತೆಗೆದುಕೊಳ್ಳೇ ಬೇಕಾಯಿತು. ತುಂಬಾ ನೊಂದುಕೊಂಡಿದ್ದೇವೆ, ಸಾಕಷ್ಟು ಸಂಘರ್ಷಗಳನ್ನು ಎದುರಿಸಿದ್ದೇವೆ, ಹೋರಾಡಿದ್ದೇವೆ. ನಮ್ಮ ಪ್ರಯತ್ನಗಳ ಬಗ್ಗೆ, ಶ್ರಮ, ಶ್ರದ್ಧೆ, ಪ್ರೀತಿ, ಕಾಳಜಿ ಬಗ್ಗೆ ದಯಮಾಡಿ ಪ್ರಶ್ನೆಗಳನ್ನು ಎತ್ತಬೇಡಿ.

ಸರಕಾರ ಈಗಾಗಲೆ ಮೈಸೂರಲ್ಲಿ ಸ್ಮಾರಕ ಮಾಡಾಗಿದೆ. ಅಲ್ಲಿ ಅಪ್ಪಾವರ ಅಸ್ಥಿಯನ್ನು ಪೂಜಾವಿಧಿಯಿಂದ ಇಟ್ಟು ಅದರ ಮೇಲೆ ಪ್ರತಿಮೆಯನ್ನು ಸ್ಥಾಪಿಸಿದ್ದೇವೆ. ಇದೇ ತಿಂಗಳು 29ಕ್ಕೆ, ಭಾನುವಾರ ಲೋಕಾರ್ಪಣೆ ಆಗಲಿದೆ. ನಾವೂ ಅಲ್ಲಿ ಅತ್ಯಂತ ಶ್ರದ್ಧೆಯಿಂದ ನಮ್ಮ ನಮನಗಳನ್ನು ಸಲ್ಲಿಸುತ್ತೆವೆ…ಅಭಿಮಾನಿಗಳೇ! ಈ ಸ್ಮಾರಕ ನಿಮಗಾಗಿ, ನಿಮಗೋಸ್ಕರ, ಯಾವುದೇ ಕಹಿ ಭಾವನೆಗಳು ಇಟ್ಟುಕೊಳ್ಳದೇ, ಬಂದು ಸಂಭ್ರಮಿಸಿ, ಅಪ್ಪಾವರಗೆ ತಮ್ಮ ನಮನಗಳನ್ನು , ಶ್ರದ್ಧಾಂಜಲಿಯನ್ನು ಸಲ್ಲಿಸಿ” ಎಂದು ಸುದೀರ್ಘವಾಗಿ ಬರೆದು ಹಂಚಿಕೊಂಡಿದ್ದಾರೆ.

ಸುಮಾರು ಎರಡು ಮುಕ್ಕಾಲು ಎಕರೆ ಜಾಗದಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತಲೆ ಎತ್ತಿದೆ. ಈ ಸ್ಮಾರಕದಲ್ಲಿ ನಟ ವಿಷ್ಣುವರ್ಧನ್‌ಗೆ ಸಂಬಂಧಿಸಿದ ಫೋಟೊ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ ಹೀಗೆ ಹತ್ತು ಹಲವು ವಿಶೇಷಗಳನ್ನು ಒಳಗೊಂಡಿದೆ. ಈಗಾಗಲೇ ಸ್ಮಾರಕ ನಿರ್ಮಾಣದ ಬಹುತೇಕ ಕೆಲಸ ಪೂರ್ಣಗೊಂಡಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಳೆದ ತಿಂಗಳೇ ಸ್ಮಾರಕ ಲೋಕಾರ್ಪಣೆ ಆಗಬೇಕಿತ್ತು. ವಿಷ್ಣು ಪುಣ್ಯಸ್ಮರಣೆ ದಿನ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು.

ಇದನ್ನೂ ಓದಿ : ಚಿತ್ರೀಕರಣ ಮುಗಿಸಿದ “ಕರಿ ಹೈದ ಕರಿ ಅಜ್ಜ” ಸಿನಿತಂಡ : ಸ್ಯಾಂಡಲ್‌ವುಡ್‌ಗೆ ಬರಲಿದೆ ಮತ್ತೊಂದು ದೈವದ ಸಿನಿಮಾ

ಇದನ್ನೂ ಓದಿ : Sunil Holkar passed away: ಚಿತ್ರನಟ ಹಾಗೂ ಖ್ಯಾತ ಕಥೆಗಾರ ಸುನೀಲ್ ಹೋಲ್ಕರ್ ವಿಧಿವಶ

ಇದನ್ನೂ ಓದಿ : ಜಗಮೆಚ್ಚಿದ “ಕಾಂತಾರ” ಸಿನಿಮಾ : ಶೀಘ್ರದಲ್ಲೇ ಕಿರುತೆರೆಗೆ

ಆದರೆ ಕಾರಣಾಂತರಗಳಿಂದ ತಡವಾಗಿದೆ. ಅಂತು ಇಂತೂ ಸರಕಾರ ವಿಷ್ಣವರ್ಧನ್ ಸ್ಮಾರಕ ಉದ್ಘಾಟನೆಗೆ ಸಿದ್ಧತೆ ನಡೆಸಿದೆ. ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಎನ್ನುವುದು ಸಾಕಷ್ಟು ಅಭಿಮಾನಿಗಳ ಆಸೆ ಆಗಿದೆ. ಆದರೆ ದಾದಾ ಕುಟುಂಬಸ್ಥರ ಆಸೆಯಂತೆ ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಸಮೀಪದಲ್ಲಿ ಸ್ಮಾರಕ ರೂಪ ತಳೆದಿದೆ. ನಟ ವಿಷ್ಣುವರ್ಧನ್‌ ಅಭಿಮಾನಿಗಳ ಬಹುದಿನದ ಕೊರಗೂ ಇದೀಗ ಈಡೇರಿದೆ.

Aniruddha Jatkar :Dr. Vishnuvardhan memorial dedication: Why is actor Anirudda doing this on social media?

Comments are closed.