ಡ್ರಗ್ಸ್ ಕೇಸ್ ನಲ್ಲಿ ಬಂಧನದ ಬೆನ್ನಲ್ಲೇ ರಾಗಿಣಿಗೆ ಮತ್ತೊಂದು ಸಂಕಷ್ಟ !

0

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಪ್ರಕರಣ ಇದೀಗ ನಟಿ ರಾಗಿಣಿ ದ್ವಿವೇದಿಗೆ ಸಂಕಷ್ಟ ತಂದೊಡ್ಡಿದೆ. ಆರೋಪ ಸಾಭೀತಾದ್ರೆ 20 ವರ್ಷಗಳ ಕಾಲ ಶಿಕ್ಷೆಯಾಗುವ ಸಾಧ್ಯತೆಯಿದೆ. ಈ ನಡುವಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಾಗಿಣಿ ವಿರುದ್ದ ಕ್ರಮಕೈಗೊಳ್ಳಲು ಮುಂದಾಗಿದ್ದು, ಕನ್ನಡ ಚಿತ್ರರಂಗದಿಂದ ಬ್ಯಾನ್ ಆಗೋ ಸಾಧ್ಯತೆ ದಟ್ಟವಾಗಿದೆ.

ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಲರ್ಟ್ ಆಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ, ನಟಿಯರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆಯನ್ನು ನಡೆಸಿದೆ.

ಈಗಾಗಲೇ ಬಂಧಿತರಾಗಿರುವ ನಟಿ ರಾಗಿಣಿ ವಿರುದ್ದದ ಆರೋಪ ಸಾಭೀತಾದ್ರೆ ನಟಿಯ ವಿರುದ್ದ ಕ್ರಮಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಫಿಲ್ಮ್ ಛೇಂಬರ್ಸ್ ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಅವರು, ರಾಗಿಣಿ ವಾಣಿಜ್ಯ ಮಂಡಳಿಯ ಸದಸ್ಯತ್ವವನ್ನು ಪಡೆದಿಲ್ಲ. ಆದರೆ ರಾಗಿಣಿ ಅಭಿನಯದ ಚಿತ್ರಗಳ ಮೇಲೆ ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ದೃಷ್ಟಿಯಿಂದ ರಾಗಿಣಿ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಮೊದಲೇ ಸಿಸಿಬಿ ಬಂಧನದಲ್ಲಿರುವ ರಾಗಿಣಿಗೆ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬಿಗ್ ಶಾಕ್ ಕೊಟ್ಟಿದೆ.

Leave A Reply

Your email address will not be published.