ಆಸ್ಪತ್ರೆಗೆ ದಾಖಲಾದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್

0

ಬೆಂಗಳೂರು : ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ರೆ ಆಸ್ಪತ್ರೆಗೆ ದಾಖಲಾದ ದಿನವೇ ಡಿಸ್ವಾರ್ಜ್ ಆಗಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಧ್ರುವ ಸರ್ಜಾ ದಂಪತಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಕುರಿತು ನಟ ಧ್ರುವ ಸರ್ಜಾ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ.

ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿಕೊಂಡಿದ್ದರು. ಆದ್ರೆ ದಂಪತಿಗೆ ಸ್ವಲ್ಪ ಜ್ವರ ಬಿಟ್ಟು ಬೇರಾವುದೇ ಲಕ್ಷಣಗಳು ಕಂಡುಬಾರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಧ್ರುವ ಸರ್ಜಾ ದಂಪತಿ ತಮಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿಯನ್ನೂ ಮಾಡಿಕೊಂಡಿದ್ದಾರೆ. ಒಂದ

Leave A Reply

Your email address will not be published.