ಚೌತಿಗೆ ಭರ್ಜರಿ ಗಿಫ್ಟ್ ಕೊಟ್ಟ ಜೋಗಿ ಪ್ರೇಮ್ !

0

ಏಕ್ ಲವ್ ಯಾ ..ಜೋಗಿ’ ಪ್ರೇಮ್​ ನಿರ್ದೇಶಕದಲ್ಲಿ ಮೂಡಿಬರುತ್ತಿರುವ ಸಿನಿಮಾ. ‘ಏಕ್​ ಲವ್​ ಯಾ’ಚಿತ್ರದ ಮೂಲಕ ಪ್ರೇಮ್​ ತಮ್ಮ ಬಾಮೈದ ರಾಣಾ ಅವರನ್ನು ನಾಯಕನ್ನಾಗಿ ಪರಿಚಯಿಸುತ್ತಿದ್ದು, ನಾಯಕಿಯಾಗಿ ಡಿಂಪಲ್ ಕ್ವೀನ್ ರಚ್ಚು ಕಾಣಿಸಿಕೊಂಡಿದ್ದಾರೆ.

ಚಿತ್ರದ ಟೀಸರ್ ಈಗಾಗಲೇ ಬಿಡುಗಡೆ ಮಾಡಿರುವ ಚಿತ್ರ ತಂಡ ಇದೀಗ ಚೌತಿಯ ಗಿಫ್ಟ್ ಆಗಿ ಚಿತ್ರದ ಮೇಕಿಂಗ್ ದ್ರಶ್ಯಗಳನ್ನು ಬಿಡುಗಡೆ ಮಾಡಿದೆ.

ಸ್ಯಾಂಡಲ್ ವುಡ್ ನಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿದ್ದ ‘ಏಕ್​ ಲವ್ ಯಾ’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿತ್ತು. ಮಾತ್ರವಲ್ಲ ಸಿನಿಮಾದ ಹಾಡುಗಳ ಶೂಟಿಂಗ್ ನಡೆಸೋ ಹೊತ್ತಿಗಾಗಲೇ ಲಾಕ್ ಡೌನ್ ಘೋಷಣೆಯಾಗಿತ್ತು. ಇದರಿಂದಾಗಿ ಜೋಗಿ ಪ್ರೇಮ್ ಚಿತ್ರಕ್ಕೆ ಕೊಂಚ ಬಿಡುವು ನೀಡಿದ್ದಾರೆ. ಈ ನಡುವಲ್ಲೇ ಏಕ್ ಲವ್ ಯಾ ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದ್ದು, ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಣೆಯನ್ನು ಮಾಡಿದ್ದಾರೆ.

ಏಕ್ ಲವ್ ಯಾ ಸಿನಿಮಾಕ್ಕೆ ರಕ್ಷಿತಾ ಪ್ರೇಮ್ ಬಂಡವಾಳ ಹೂಡುತ್ತಿದ್ದು, ಪ್ರೇಮ್ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ರಾಣಾಗೆ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ಗ್ರೀಷ್ಮಾ ಬಣ್ಣ ಹಚ್ಚಿದ್ದಾರೆ. ಅರ್ಜುನ್ ಜನ್ಯಾ ಮ್ಯೂಸಿಕ್ ನೀಡಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಾಹಕರಾಗಿ ಕಾಣಿಸಿಕೊಂಡಿದ್ದಾರೆ.

ಲಾಕ್ ಡೌನ್ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಪ್ರೇಮ್ ಮುಂದಿನ ತಿಂಗಳಿನಿಂದ ಚಿತ್ರದ ಚಿತ್ರೀಕರಣವನ್ನು ಆರಂಭಿಸುವ ಸಾಧ್ಯತೆಯಿದೆ.

Leave A Reply

Your email address will not be published.