Genie Movie : ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಹೊಸ ಸಿನಿಮಾ : ಚೆನ್ನೈನಲ್ಲಿ ಜೀನಿ ಅದ್ಧೂರಿ ಮುಹೂರ್ತ

ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ (Genie Movie) ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆಷ್ಟೇ ಇರೈವನ್ ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ಅವರ 32ನೇ ಸಿನಿಮಾಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವೆಲ್ಸ್ ಫಿಲಂಸ್ ಇಂಟರ್‌ನ್ಯಾಶನಲ್‌ನಡಿ ಡಾ.ಇಶಾರಿ ಕೆ ಗಣೇಶ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಚೆನ್ನೈನಲ್ಲಿಂದು ಸೆಟ್ಟೇರಿರುವ ಈ ಸಿನಿಮಾಗೆ ಜೀನಿ ಎಂಬ ಟೈಟಲ್ ಇಡಲಾಗಿದೆ.

ಯುವ ನಿರ್ದೇಶಕ ಅರ್ಜುನನ್ ಜೆ ಆರ್ ನಿರ್ದೇಶನದಲ್ಲಿ ಜಯಂ ರವಿ ನಾಯಕನಾಗಿ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕಲ್ಯಾಣಿ ಪ್ರಿಯದರ್ಶನ್, ವಾಮಿಕಾ ಗಬ್ಬಿ ಮತ್ತು ದೇವಯಾನಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹೇಶ್ ಮುತ್ತುಸಾಮಿ ಛಾಯಾಗ್ರಹಣ ಈ ಸಿನಿಮಾಕ್ಕಿದೆ. ಎ.ಆರ್. ರೆಹಮಾನ್ ಅವರ ಸಂಗೀತ ಸಂಯೋಜನೆ ಅದ್ಭುತ ಹಾಡುಗಳು ಈ ಸಿನಿಮಾದಲ್ಲಿ ಮೂಡಿ ಬರಲಿದೆ.

ಇದನ್ನೂ ಓದಿ : Kalyan Ram : ಕಲ್ಯಾಣ್ ರಾಮ್ ಹುಟ್ಟುಹಬ್ಬಕ್ಕೆ ಡೆವಿಲ್ ಗ್ಲಿಂಪ್ಸ್ ಉಡುಗೊರೆ : ಏಜೆಂಟ್ ಹೇಗಿರಬೇಕು ಗೊತ್ತಾ?

ಇದನ್ನೂ ಓದಿ : Kichcha Sudeepa : ಅಭಿನಯ ಚಕ್ರವರ್ತಿ ಸುದೀಪ್‌ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿ

ಪ್ರದೀಪ್ ಇ ರಾಘವ್ ಸಂಕಲನ, ಹಾಲಿವುಡ್ ಮತ್ತು ಅಂತರಾಷ್ಟ್ರೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಸ್ಟಂಟ್ ಕೊರಿಯೋಗ್ರಾಫರ್‌ಗಳಲ್ಲಿ ಒಬ್ಬರಾದ ಯಾನಿಕ್ ಬೆನ್ ಈ ಸಿನಿಮಾಕ್ಕೆ ಇದೆ. ಹಲವು ರೀತಿಯ ಆಕ್ಷನ್ ಸೀಕ್ವೆನ್ಸ್ ಖದರ್ ಸಿನಿಮಾದಲ್ಲಿರಲಿದೆ. ಜೀನಿ ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ 25 ನೇ ಸಿನಿಮಾವಾಗಿದ್ದು, ದುಬಾರಿ ಬಜೆಟ್‌ನಲ್ಲಿ ತಯಾರಾಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿರುವ ಜೀನಿ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

Genie Movie : Ponniyin Selvan Starr Jayamravi New Movie : Genie Grand Opening in Chennai

Comments are closed.