ಪರಂವಃ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಸಿದ್ದವಾಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’: ಪೋಸ್ಟರ್‌ ಬಿಡುಗಡೆಗೊಳಿಸಿದ ರಕ್ಷಿತ್‌ ಶೆಟ್ಟಿ

(Hostel hudugaru bekagiddare) ರಕ್ಷಿತ್‌ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್‌ ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿದೆ. ಈಗಲೂ ಕೂಡ ಮತ್ತೊಂದು ಅದ್ಭುತ ಚಿತ್ರವನ್ನು ಕನ್ನಡ ಚಿತ್ರರಂಗಕ್ಕೆ ನೀಡಲು ಪರಂವಃ ಪಿಕ್ಚರ್ಸ್‌ ಸಿದ್ದವಾಗಿದ್ದು, ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರದ ಪೋಸ್ಟರ್‌ ಅನ್ನು ಕೂಡ ಬಿಡುಗಡೆ ಮಾಡಲಾಗಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತಂಡ ಗಮನ ಸೆಳೆದಿತ್ತು. ಇದೀಗ ಈ ತಂಡವು ಹೆಮ್ಮೆಯಿಂದ ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರವನ್ನು ಅಭಿಮಾನಿಗಳ ಮುಂದೆ ಪ್ರಸ್ತುತ ಪಡಿಸಲು ಸಜ್ಜಾಗಿದೆ. ರಕ್ಷಿತ್‌ ಶೆಟ್ಟಿ ಅವರು ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರದ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದ್ದು, ಪ್ರಮೋಷನಲ್‌ ಕಂಟೆಂಟ್‌ ಮೂಲಕ ಗಮನ ಸೆಳೆದಿದ್ದ ಚಿತ್ರ, ಪೋಸ್ಟರ್‌ ಮೂಲಕವೂ ಗಮನ ಸೆಳೆಯುತ್ತಿದೆ.

ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಅಲ್ಲದೇ ಇದೀಗ ಚಿತ್ರದ (Hostel hudugaru bekagiddare) ಪೋಸ್ಟರ್‌ ಕೂಡ ಜನರನ್ನು ಇಂಪ್ರೆಸ್‌ ಮಾಡುತ್ತಿದ್ದು, ಉತ್ತಮ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದ್ದು, ಪರಂವಃ ಪಿಕ್ಚರ್ಸ್‌ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ.

ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರ(Hostel hudugaru bekagiddare)ವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಈ ಚಿತ್ರದಲ್ಲಿರಲಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ನೀಡಿದ್ದು, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣ, ಹಾಗೂ ಸುರೇಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇದೀಗ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ಪರಂವಃ ಪಿಕ್ಚರ್ಸ್‌ ಹೆಮ್ಮೆಯಿಂದ ಪ್ರಸ್ತುತ ಪಡಿಸುತ್ತಿದ್ದು, ರಕ್ಷಿತ್‌ ಶೆಟ್ಟಿ ಈ ಬಗ್ಗೆ ತಮ್ಮ ಅಭಿಪ್ರಾಯಯನ್ನು ಹಂಚಿಕೊಂಡಿದ್ದಾರೆ. ” ನಮ್ಮ ‘ಪರಂವಃ ಪಿಕ್ಚರ್ಸ್’ ಹೆಮ್ಮೆಯಿಂದ ಪ್ರಸ್ತುತ ಪಡಿಸುತ್ತಿರುವ ಮುಂದಿನ ಚಿತ್ರ ‘Hostel ಹುಡುಗರು ಬೇಕಾಗಿದ್ದಾರೆ’. ಪ್ರೀತಿಯಿರಲಿ.. ಈ ಚಿತ್ರವನ್ನು ಪ್ರಸ್ತುತ ಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತರುತ್ತಿದೆ. ಈ ಹಿಂದೆ ನಾವು ಪ್ರಸ್ತುತಪಡಿಸಿದ ಚಿತ್ರಕ್ಕಿಂತ ವಿಭಿನ್ನ ಪ್ರಕಾರದಲ್ಲಿ ಈ ಚಿತ್ರವಿದೆ. ಮತ್ತೊಂದು ಅಸಾಧಾರಣ ಚಿತ್ರವಿದಾಗಿದ್ದು, ಈ ಚಿತ್ರವನ್ನು ಚಿತ್ರಿಸಿದ ರೀತಿಯಲ್ಲಿ, ದೇಶದ ಯಾವುದೇ ಚಲನಚಿತ್ರವು ಈ ಶೈಲಿಯನ್ನು ಮೊದಲು ಅನ್ವೇಷಿಸಿಲ್ಲ ಎಂದು ನಾನು ವಿಶ್ವಾಸದಿಂದ ಹೇಳಿಕೊಳ್ಳಬಲ್ಲೆ. ನಮ್ಮ ಇಂಡಸ್ಟ್ರಿ ಹೆಮ್ಮೆ ಪಡುವ ಇನ್ನೊಂದು ಚಿತ್ರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel hudugaru bekagiddare) ಎಂದು ಹೆಮ್ಮೆಯಿಂದ ಪ್ರಸ್ತುತಪಡಿಸಿದ ‘ಪರಮವಾ ಪಿಕ್ಚರ್ಸ್’.” ಎಂದು ತಮ್ಮ ಫೇಸ್‌ ಬುಕ್‌ ಪೇಜ್‌ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : Sonam Kapoor : ಮುಂಬೈನ ತನ್ನ ಐಷಾರಾಮಿ ಅಪಾರ್ಟ್ ಮೆಂಟ್ ಮಾರಾಟ ಮಾಡಿದ ನಟಿ ಸೋನಂ‌ ಕಪೂರ್

Hostel hudugaru bekagiddare: ‘Hostel Boys Wanted’ ready under Paramvah Pictures banner: Rakshit Shetty releases poster

Comments are closed.