10 ಮಿಲಿಯನ್ ವೀವ್ಸ್ ಸಿಗದೆ ಅಜನೀಶ್ ಲೋಕನಾಥ್‌ಗೆ ಬಿಡುಗಡೆ ಭಾಗ್ಯವಿಲ್ಲ ಎಂದ “ಹಾಸ್ಟೆಲ್ ಹುಡುಗರು”

ಹಾಸ್ಟೆಲ್ ಹುಡುಗರೆಲ್ಲ ಸೇರಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‌ರನ್ನು ಕಿಡ್ನಾಪ್ (Hostel Hudugaru Bekagiddare) ಮಾಡಿದ್ದಾರೆ. ಎರಡು ವಾರವಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಇಷ್ಟು ದಿನ ಹಾಡು ಬಿಡುಗಡೆ ಮಾಡಿ ಎಂದು ಬೇಡಿಕೆ ಇಟ್ಟಿದ್ದ ಹುಡುಗರು ಈಗ ಬಿಡುಗಡೆಯಾಗಿರುವ ಹಾಡು ಹತ್ತು ಮಿಲಿಯನ್ ವೀವ್ಸ್ ಪಡೆದ ಮೇಲೆ ಬಿಡುಗಡೆ ಮಾಡುತ್ತೇವೆ ಎಂದು ಹಿಂಸೆ ನೀಡುತ್ತಿದ್ದಾರೆ ಎಂದು ಅಜನೀಶ್ ಲೋಕನಾಥ್ ಅಳಲು ತೋಡಿಕೊಂಡಿದ್ದಾರೆ.

ಬಿಡುಗಡೆಯಾಗಿರುವ ‘ಪ್ರೊಟೆಸ್ಟ್ ಸಾಂಗ್’ ಹತ್ತು ಮಿಲಿಯನ್ ವೀವ್ಸ್ ಪಡೆಯಲು ಸಹಕರಿಸಿ ಎಂದು ಕರ್ನಾಟಕ ಜನತೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಅಜನೀಶ್. ಆದರೆ ಇದೆಲ್ಲ ರಿಯಲ್ ಅಲ್ಲ ರೀಲ್ ಅನ್ನೋದು ಮರೆಯೋ ಹಾಗಿಲ್ಲ. ಹೌದು, ಇದು ಬಿಡುಗಡೆಗೆ ಸಜ್ಜಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಪ್ರಮೋಶನ್ ತಂತ್ರವಾಗಿದೆ.ಸಖತ್ ಕ್ರಿಯೇಟಿವ್ ಆಗಿ ಸಿನಿಮಾ ಪ್ರಮೋಷನ್ ಮಾಡುತ್ತಾ ಕಲಾರಸಿಕರನ್ನು ತನ್ನತ್ತ ಸೆಳೆಯುತ್ತಿರುವ, ಕುತೂಹಲ ಹುಟ್ಟು ಹಾಕಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’.

ಕಳೆದ ವಾರ ಸಿನಿತಂಡ ‘ಪ್ರೊಟೆಸ್ಟ್ ಸಾಂಗ್’ ಬಿಡುಗಡೆ ಮಾಡಿತ್ತು. ಸಿನಿಮಾದ ಮೊದಲ ಸಾಂಗ್ ಬಿಡುಗಡೆಯಾಗುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ ಅಧಿಕ ವೀವ್ಸ್ ಪಡೆದುಕೊಂಡಿತ್ತು. ಯೋಗರಾಜ್ ಭಟ್ ಕ್ಯಾಚಿ ಲಿರಿಕ್ಸ್, ಅಜನೀಶ್ ಲೋಕನಾಥ್ ಕಿಕ್ ಕೊಡೋ ಮ್ಯೂಸಿಕ್ ಹಾಗೂ ಹಾಡು ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ಇದೀಗ ಈ ಹಾಡು ಹತ್ತು ಮಿಲಿಯನ್ ವೀವ್ಸ್ ಕಾಣಬೇಕೆಂಬುದು ಹಾಸ್ಟೆಲ್ ಹುಡುಗರ ಮಹದಾಸೆ ಆಗಿದೆ. ಅದಕ್ಕೆಂದೇ ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‌ರಿಂದ ಪತ್ರ ಬರೆಸಿ ಮನವಿ ಮಾಡಿದೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಇದನ್ನೂ ಓದಿ : ನಟ ಪರಂಬ್ರತ ಚಟರ್ಜಿ ಜೊತೆ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ರಾಗಿಣಿ ದ್ವಿವೇದಿ

ಇದನ್ನೂ ಓದಿ : ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾದಲ್ಲಿ ಸ್ಟೈಲಿಶ್‌ ಅವತಾರದಲ್ಲಿ ನಟ ಶಿವರಾಜ್‌ಕುಮಾರ್

ಇದನ್ನೂ ಓದಿ : Golden Globes 2023 : ಗೋಲ್ಡನ್ ಗ್ಲೋಬ್ಸ್‌ನಲ್ಲಿ ಅತ್ಯುತ್ತಮ ಮೂಲ ಹಾಡಿಗಾಗಿ ಪ್ರಶಸ್ತಿ ಬಾಚಿಕೊಂಡ ‘ನಾಟು ನಾಟು’ ಹಾಡು

ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಸಿನಿಮಾದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇರಲಿದೆ. ಪುನೀತ್ ರಾಜ್ ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ. ಯೂನೀಕ್ ಕಾನ್ಸೆಪ್ಟ್ ಮೂಲಕ ಸಿನಿಮಾದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಸಿನಿಮಾಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

Hostel Hudugaru Bekagiddare: “Hostel Hudugaru” say Ajaneesh Loknath will not be released without getting 10 million views.

Comments are closed.