ದಂಪತಿ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಜೈ ಜಗದೀಶ್​ – ವಿಜಯಲಕ್ಷ್ಮೀ ಸಿಂಗ್​

Jai Jagadish: ಚಂದನವನದ ಹಿರಿಯ ನಟ, ನಿರ್ಮಾಪಕ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜೈ ಜಗದೀಶ್​ ಮತ್ತವರ ಪತ್ನಿ ನಟಿ, ನಿರ್ದೇಶಕಿ, ನಿರ್ಮಾಪಕಿ, ವಸ್ತ್ರ ವಿನ್ಯಾಸಕಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮೀ ಸಿಂಗ್​ ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದ ದಂಪತಿ ಬಳಿಕ ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರಿಂದ ಆಶೀರ್ವಾದ ಪಡೆದು ಭೋಜನ ಪ್ರಸಾದ ಸ್ವೀಕರಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕಟಿಸಿರುವ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜಯಲಕ್ಷ್ಮೀ ಸಿಂಗ್​ ಕೂಡ ಸ್ಥಾನ ಪಡೆದಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದ ಬಳಿಕ ಇದೇ ಮೊದಲಬಾರಿಗೆ ವಿಜಯಲಕ್ಷ್ಮೀ ಸಿಂಗ್​ ದಂಪತಿ ಸಮೇತರಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

Also Read: ಗತವೈಭವ ಟ್ರೇಲರ್ ಬಿಡುಗಡೆ ಮಾಡಿ ಅಭಿನಯ ಚಕ್ರವರ್ತಿ ಏನಂದ್ರು ನೋಡಿ

ಅಂದಹಾಗೆ ಜೈಜಗದೀಶ್​ ಕೂಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲಾವಿದರಾಗಿದ್ದು 2018ರಲ್ಲಿ ಇವರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಕಲಾವಿದರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಈ ದಂಪತಿ ಕನ್ನಡ ಚಿತ್ರರಂಗಕ್ಕೆ ಅಗಣ್ಯ ಕೊಡುಗೆ ನೀಡಿದ್ದಾರೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories