Jodern: ಕೌಟುಂಬಿಕ ಕಥಾಹಂದರವನ್ನು ಒಳಗೊಂಡ “ಜೋಡರ್ನ್‌” ಚಿತ್ರದ ಟ್ರೇಲರ್‌ ಬಿಡುಗಡೆ

(Jodern) ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್‌ ಹಾಗೂ ಕವಲು ದಾರಿ ಖ್ಯಾತಿಯ ಸಂಪತ್‌ ಮೈತ್ರೇಯ ಅವರು ಮೂಖ್ಯ ಭುಮಿಕೆಯಲ್ಲಿ ನಟಿಸಿರುವ, ವಿನೋದ್‌ ಧಯಾಳನ್‌ ನಿರ್ದೇಶನದ ಜೋಡರ್ನ್‌ ಚಿತ್ರದ ಟ್ರೇಲರ್‌ ಇಂದು ಬಿಡುಗಡೆಗೊಂಡಿದೆ. ಬಹು ನಿರೀಕ್ಷಿತ ಟ್ರೇಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರು ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಜೋಡರ್ನ್‌ (Jodern) ಚಿತ್ರದ ಟ್ರೇಲರ್‌ ಇಂದು ಬಿಡುಗಡೆಯಾಗಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ‘ವೈಫಲ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ, ಪ್ರತಿಯೊಬ್ಬರೂ ಯಾವುದಾದರೂ ವಿಷಯದಲ್ಲಿ ವಿಫಲರಾಗುತ್ತಾರೆ ಆದರೆ ಪ್ರಯತ್ನ ಪಡದೇ ವೈಫಲ್ಯವನ್ನು ನಾನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಕಥೆಯನ್ನು ಬರೆಯಲಾಗಿದೆ.

ಇದೊಂದು ಕೌಟುಂಬಿಕ ಕಥಾಹಂದರವನ್ನು ಒಳಗೊಂಡಿದ್ದು, ಸ್ಪೂರ್ತಿದಾಯಕ ಸಿನಿಮಾವಾಗಿದೆ. “ಈ ಹಿಂದೆ ಕಿರು ಚಿತ್ರಗಳನ್ನು ನಿರ್ದೇಶನ ಮಾಡಿಕೊಂಡಿದ್ದೆ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಕಟೆಂಟ್ ಗೆ ಏನು ಬೇಕೋ ಅದನ್ನು ಮಾಡಿದ್ದೇವೆ. ಔಟ್ ಪುಟ್ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಚಿತ್ರದ ಬಗ್ಗೆ ನಿರ್ದೇಶಕ ವಿನೋದ್‌ ಧಯಾಳನ್‌ ಅವರು ಹೇಳಿದ್ದಾರೆ. ಮಹೇಂದ್ರ ಪ್ರಸಾದ್ ಈ ಚಿತ್ರದಲ್ಲಿ ಮೈಕಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ತಂದೆ ಮಗನ ಬಾಂದವ್ಯ ಈ ಚಿತ್ರದಲ್ಲಿ ಮೂಡಿಬಂದಿದೆ.

ಸೀತಾರ, ಸುನೀಲ್, ಯೋಗೇಶ್ ಶಂಕರ್ ನಾರಾಯಣನ್, ಗಣೇಶ್ ಜೈ ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದು, ನೋ ನಾನ್ಸೆನ್ಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಜೆ.ಜಾನಕಿರಾಮ್, ಎನ್ ಆರ್.ಪಾಟೀಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಜೈಕುಮಾರ್ ಜೆ ಸ್ಟಾಲಿನ್ ಅವರು ಛಾಯಾಗ್ರಹಣ ಮಾಡಿದ್ದು, ಸಾಯಿ ಸರ್ವೇಶ್ ಸಂಗೀತ ನಿರ್ದೇಶನ ಹಾಗೂ ಸಾಹಿತ್ಯವನ್ನು ನೀಡಿದ್ದಾರೆ. ನಿರಂಜನ್ ದೇವರಮನೆ ಸಂಕಲನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಪ್ರೇಕ್ಷಕರಲ್ಲಿ ಬಹಳ ಕುತೂಹಲ ಹಾಗೂ ನಿರೀಕ್ಷೆಯನ್ನುಂಟುಮಾಡುತ್ತಿದೆ.

ಇದನ್ನೂ ಓದಿ : Malenadu Film Festival: ಮಲೆನಾಡಿನ ಸಿನಿಹಬ್ಬಕ್ಕೆ ಜೊತೆಯಾದ ಸತ್ಯ ಪಿಕ್ಚರ್ಸ್ ಹಾಗೂ ಅನ್ಲಾಕ್ ರಾಘವ ಚಿತ್ರತಂಡ

ಇದನ್ನೂ ಓದಿ : ನೋಯ್ಡಾದಲ್ಲಿ ಐಶ್ವರ್ಯಾ ರೈ ಬಚ್ಚನ್ ನಕಲಿ ಪಾಸ್‌ಪೋರ್ಟ್ ಪತ್ತೆ: ಮೂವರ ಬಂಧನ

(Jodern) The trailer of Jodern directed by Vinod Dhayalan, starring Mahendra Prasad of Comedy Kiladilu fame and Sampath Maitreya of Kavalu Dari fame in Mukhya Bhumike, was released today. The much awaited trailer has been released by the film team. B. M. Harish, President of the Board of Film Commerce, wished the film team all the best by releasing the trailer.

Comments are closed.