ನಟ, ನಿರ್ದೇಶಕ ಜೋಗಿ ಪ್ರೇಮ್ ತಾಯಿ ನಿಧನ

0

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ. ಹಲವು ಸಮಯಗಳಿಂದಲೂ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತ ಕ್ಯಾನ್ಸರ್) ಬಳಲುತ್ತಿದ್ದ ಭಾಗ್ಯಮ್ಮ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸದರೆ ಶುಕ್ರವಾರದ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಭಾಗ್ಯಮ್ಮ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಅರುಣ್ ಎಂಬ ಇಬ್ಬರು ಮಕ್ಕಳಿದ್ದಾರೆ. ಭಾಗ್ಯಮ್ಮ ಅವರ ಕೊರೊನಾ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾಗ್ಯಮ್ಮ ಅವರ ಅಂತ್ಯಕ್ರಿಯೆ ಮಂಡ್ಯದ ಬೆಸಗರಹಳ್ಳಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಅತ್ತೆ ಭಾಗ್ಯಮ್ಮ ನಿಧನ ಸುದ್ದಿಯನ್ನು ಪ್ರೇಮ್ ಪತ್ನಿ ರಕ್ಷಿತಾ ಪ್ರೇಮ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

https://www.facebook.com/permalink.php?story_fbid=2756980867880944&id=1378335562412155
Leave A Reply

Your email address will not be published.