ಚೆನ್ನೈ : ದಕ್ಷಿಣ ಭಾರತ ಖ್ಯಾತ ನಟ ಕಮಲ್ ಹಾಸನ್ (Kamal Haasan) ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿನಿಮಾದ ಚಿತ್ರೀಕರಣಕ್ಕಾಗಿ ಅಮೇರಿಕಾಕ್ಕೆ ತೆರಳಿ ವಾಪಾಸಾದ ಬೆನ್ನಲ್ಲೇ ಅವರಿಗೆ ಕೆಮ್ಮು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಪರೀಕ್ಷೆಗೆ ಒಳಪಟ್ಟಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಟ್ವೀಟರ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನಟ -ರಾಜಕಾರಣಿ ಕಮಲ್ ಹಾಸನ್ ಇಂದು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಈ ವೇಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಕಮಲ್ ಹಾಸನ ಅವರು ಆರೋಗ್ಯವಾಗಿದ್ದು, ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಕಮಲ್ ಹಾಸನ್ ಅವರು ಚಿಕಾಗೋದಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ.
ನವೆಂಬರ್ 7 ರಂದು ಕಮಲ್ ಹಾಸನ್ ತಮ್ಮ 67 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆಯಲ್ಲಿಯೇ ಅವರ ಮುಂದಿನ ಸಿನಿಮಾ ವಿಕ್ರಂ ಕುರಿತು ನಿರ್ಮಾಪಕರು ಘೋಷಣೆ ಮಾಡಿದ್ದರು. ವಿಜಯ್ ಸೇತುಪತಿ ಹಾಗೂ ಫಹದ್ ಫಾಸಿಲ್ ನಟಿಸಿರುವ ಈ ಸಿನಿಮಾ ಕಮಲ್ ಹಾಸನ್ ಅವರ 232ನೇ ಸಿನಿಮಾವಾಗಿದೆ.
அமெரிக்கப் பயணம் முடிந்து திரும்பிய பின் லேசான இருமல் இருந்தது. பரிசோதனை செய்ததில் கோவிட் தொற்று உறுதியானது. மருத்துவமனையில் தனிமைப்படுத்திக் கொண்டுள்ளேன். இன்னமும் நோய்ப்பரவல் நீங்கவில்லையென்பதை உணர்ந்து அனைவரும் பாதுகாப்பாக இருங்கள்.
— Kamal Haasan (@ikamalhaasan) November 22, 2021
Kamal Haasan admitted to hospital