ಬೆಂಗಳೂರು : ಬ್ರಾಹ್ಮಣ ಹಾಗೂ ಬ್ರಾಹ್ಮಣ್ಯದ ವಿರುದ್ದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟ ಚೇತನ್ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ.
ನಟ ಉಪೇಂದ್ರ ಅವರು ಆಹಾರ ಸಾಮಗ್ರಿಗಳ ವಿತರಣೆಯ ವಿಚಾರದಲ್ಲಿ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆಯಲ್ಲಿ ಬ್ರಾಹ್ಮಣರ ಮಾತನಾಡಿರುವ ವಿಡಿಯೋವೊಂದನ್ನು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಬ್ರಾಹ್ಮಣ್ಯದ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ. ಅಲ್ಲದೇ ವ್ಯಂಗ್ಯವಾಗಿ ಮಾತನಾಡಿದ್ದು, ಬ್ರಾಹ್ಮಣರು ಭಯೋತ್ಪಾದಕರು ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಈ ಕುರಿತು ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದೆ.
ಇದೀಗ ವಿಪ್ರ ವೇದಿಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಠಾಣೆಯ ಪೊಲೀಸರು ನಟ ಚೇತನ್ ವಿರುದ್ದ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ. ಚೇತನ್ ವಿರುದ್ದ ಇದೀಗ ಸೆಕ್ಷನ್ 153 (ಬಿ), 295 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.