Aparna Vastarey : ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅರ್ಪಣಾ ವಸ್ತಾರೆ ಅವರು ವಿಧಿಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಿನಿಮಾ ನಟಿಯಾಗಿ, ನಿರೂಪಕಿಯಾಗಿ ಅಪರ್ಣಾ ಹೆಚ್ಚು ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿ ಮೂಲದವರಾಗಿರುವ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿ ವಾಸವಾಗಿದ್ದರು. ಹಲವು ಸಮಯದಿಂದಲೂ ಅನಾರೋಗ್ಯದಿಂದ ಅವರು ಬಳಲುತ್ತಿದ್ದು, ಬನಶಂಕರಿಯ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
೧೯೮೪ರಲ್ಲಿ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ ಅವರ ಮಸಣದ ಹೂವು ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪರ್ಣಾ ಅವರು ನಟಿಯಾಗಿ, ನಿರೂಪಕಿಯಾಗಿ ಪ್ರಖ್ಯಾತಿಗಳಿಸಿದ್ದರು. ಅಪರ್ಣಾ ಅವರು ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದರು. ಅಲ್ಲದೇ ಭಾರತ ಸರಕಾರ ವಿವಿಧ ಭಾರತಿಯಲ್ಲಿ ರೆಡಿಯೋ ಜಾಕಿಯಾಗಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ : ಎ ಸಿನಿಮಾ ಸುಂದರಿ ಈಗ ಡಾಕ್ಟರ್: ಚಾಂದಿನಿ ಚಮಕ್ ಕಂಡು ಬೆರಗಾದ ಚಂದನವನ
ಅದ್ರಲ್ಲೂ ರೆಡಿಯೋ ಕಾರ್ಯಕ್ರಮವೊಂದರಲ್ಲಿ ಸತತ ಎಂಟು ಗಂಟೆಗಳ ಕಾಲ ಕಾರ್ಯಕ್ರಮ ನಿರೂಪಣೆ ಮಾಡುವ ಮೂಲಕ ವಿಶಿಷ್ಟ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಾದ ಮುಕ್ತ, ಮೂಡಲಮನೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಪರ್ಣಾ ಅವರು ಬಣ್ಣ ಹಚ್ಚಿದ್ದರು. ಇನ್ನು ಲೋಕೇಶ್ ಪ್ರೊಡಕ್ಷನ್ಸ್ ಸೃಜನ್ ಲೋಕೇಶ್ ನೇತೃತ್ವದಲ್ಲಿ ನಡೆಸಿಕೊಟ್ಟ ಮಜಾ ಟಾಕೀಸ್‌ನ ಮೂಲಕ ಮನೆ ಮಾತಾಗಿದ್ದರು.

ಇದನ್ನೂ ಓದಿ : ಮಾಲಿವುಡ್ ಗೆ ಮರಳಿದ ಮೇಘನಾ ರಾಜ್ ಸರ್ಜಾ: ಸದ್ಯದಲ್ಲೇ ಅನೌನ್ಸ್ ಆಗಲಿದೆ ಕುಟ್ಟಿಮಾ ಹೊಸ ಸಿನಿಮಾ
ಕನ್ನಡದ ಬಿಗ್‌ಬಾಸ್ ಮೊದಲ ಸೀಸನ್‌ನಲ್ಲಿ ಅಪರ್ಣಾ ಅವರು ಸ್ಪರ್ಧಿಯಾಗಿದ್ದರು. ಯಾವುದೇ ಕಾರ್ಯಕ್ರಮವಿರಲಿ. ಕನ್ನಡದಲ್ಲಿ ನಿರರ್ಗಳವಾಗಿ ನಿರೂಪಣೆ ಮಾಡುವಲ್ಲಿ ಅಪರ್ಣಾ ಎತ್ತಿದ ಕೈ. ಅಪರ್ಣಾ ಅವರು ನಿರೂಪ ಣೆ ಮಾಡುತ್ತಿದ್ದರೆ, ಎಲ್ಲರೂ ಕುತೂಹಲದಿಂದ ಆಲಿಸುತ್ತಿದ್ದರು. ಇದೀಗ ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ರಂಗದ ಗಣ್ಯರು, ಕನ್ನಡ ಸಿನಿಮಾ ರಂಗದ ನಟ, ನಟಿಯರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ : ಡಾಲಿ ಧನಂಜಯ ವಿದ್ಯಾಪತಿಗೆ ಹಿಟ್ಲರ್ ಕಲ್ಯಾಣ ಖ್ಯಾತಿಯ ಮಲೈಕಾ ವಸೂಪಾಲ್ ನಾಯಕಿ
Kannada Actor Popular Anchor Aparna Vastarey Passes away du to cancer