Vinod Prabhakar: ಕನ್ನಡ ಖ್ಯಾತ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ದಿಢೀರ್ ಏರುಪೇರು: ಹೇಗಿದೆ ಆರೋಗ್ಯ ಸ್ಥಿತಿ ?

ನಟ ವಿನೋದ್‌ ಪ್ರಭಾಕರ್‌ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್‌ ಏರುಪೇರು ಕಂಡು ಬಂದಿದ್ದು, ಕೂಡಲೇ ಅವರನ್ನು ಬೆಂಗಳೂರಿನ ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಆ್ಯಕ್ಷನ್ ಸ್ಟಾರ್, ‘ಮರಿ ಟೈಗರ್’ ಖ್ಯಾತಿಯ ನಟ ವಿನೋದ್ ಪ್ರಭಾಕರ್ ಅವರು ಹಠಾತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟ ವಿನೋದ್‌ ಪ್ರಭಾಕರ್‌ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್‌ ಏರುಪೇರು ಕಂಡು ಬಂದಿದ್ದು, ಕೂಡಲೇ ಅವರನ್ನು ಬೆಂಗಳೂರಿನ ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿನೋದ್‌ ಪ್ರಭಾಕರ್‌ಗೆ ವೈದ್ಯರ ತಂಡದ ಚಿಕಿತ್ಸೆ : ಆರೋಗ್ಯ ಸ್ಥಿತಿ ಹೇಗಿದೆ?

ಸದ್ಯಕ್ಕೆ ವಿಶ್ವಾಸಾರ್ಹ ಮೂಲಗಳ ಪ್ರಕಾರ, ವಿನೋದ್ ಪ್ರಭಾಕರ್ ಅವರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ತಜ್ಞ ವೈದ್ಯರ ತಂಡ ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ಅಗತ್ಯ ವೈದ್ಯಕೀಯ ತಪಾಸಣೆಗಳನ್ನು ನಡೆಸಿದೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತಜ್ಞ ವೈದ್ಯರ ನಿರಂತರ ನಿಗಾದಲ್ಲಿ ಇರಿಸಲಾಗಿದೆ.

Also Read : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಕೇಸ್‌: ಬೆಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ

ಪ್ರಾಥಮಿಕ ವರದಿಗಳ ಪ್ರಕಾರ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ (Stable) ಎನ್ನಲಾಗಿದ್ದು, ಅಭಿಮಾನಿಗಳು ಭೀತಿ ಪಡುವ ಅಗತ್ಯವಿಲ್ಲ. ಆದರೆ, ಯಾವ ಕಾರಣಕ್ಕಾಗಿ ಅವರಿಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಅನ್ನೋ ತಿಳಿದು ಬಂದಿಲ್ಲ. ಈ ಕುರಿತು ಕುಟುಂಬದವರಾಗಲಿ ಅಥವಾ ಆಸ್ಪತ್ರೆಯ ವೈದ್ಯಕೀಯ ಮಂಡಳಿಯಾಗಲಿ ಇನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿಲ್ಲ.

ವಿನೋದ್‌ ಪ್ರಭಾಕರ್‌ಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳಿಂದ ಹಾರೈಕೆ:

ಕನ್ನಡ ಚಿತ್ರರಂಗದ ದಿವಂಗತ ಹಿರಿಯ ನಟ ‘ಟೈಗರ್’ ಪ್ರಭಾಕರ್ ಅವರ ಪುತ್ರನಾಗಿರುವ ವಿನೋದ್ ಪ್ರಭಾಕರ್ ಅವರು ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸ ಸಿನಿಮಾಗಳ ಸ್ಕ್ರಿಪ್ಟ್ ಹಾಗೂ ಶೂಟಿಂಗ್ ಕೆಲಸಗಳಲ್ಲಿ ಸಕ್ರಿಯರಾಗಿದ್ದ ನಟ ಆಸ್ಪತ್ರೆ ಸೇರಿರುವ ಸುದ್ದಿ ಕೇಳಿ ಚಿತ್ರರಂಗದ ಆಪ್ತರು ಹಾಗೂ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

Also Read : ದಾಸನ ಜೈಲುವಾಸಕ್ಕೆ ಇಂದಿಗೆ 2 ವರ್ಷ: 2027ರ ಮೇ ವರೆಗೂ ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ ಸಿಗಲ್ವಾ?

ನಟನ ಆರೋಗ್ಯದ ಕುರಿತು ಆಸ್ಪತ್ರೆಯಿಂದ ಅಥವಾ ಅವರ ಕುಟುಂಬದಿಂದ ಅಧಿಕೃತ ಹೆಲ್ತ್ ಬುಲೆಟಿನ್ ಹೊರಬೀಳಬೇಕಾಗಿದ್ದು, ಹೆಚ್ಚಿನ ಅಪ್‌ಡೇಟ್‌ಗಳನ್ನು ನಿರೀಕ್ಷಿಸಲಾಗುತ್ತಿದೆ.

Exit mobile version